#Exclusive NewsTop Newsಜಿಲ್ಲೆಸುದ್ದಿ

‘ಕಾಂಗ್ರೆಸ್​ ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿದೆ’ ; ಪ್ರಹ್ಲಾದ್ ಜೋಶಿ

ಕರ್ನಾಟಕದಲ್ಲಿ ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂತು. ಆದರೆ ಈಗ ನಿತ್ಯದ ಜೀವನಕ್ಕೆ ಬೇಕಾದ ಎಲ್ಲ ದರಗಳು ಹೆಚ್ಚಾಗಿವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು. ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಖಂಡಿಸಿ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ದೇಶದಲ್ಲಿ ಸುಳ್ಳು ಗ್ಯಾರಂಟಿ ಕೊಟ್ಟಿತ್ತು. ಅದು ಈಗ ಎಕ್ಸ್​ಪೋಸ್ ಆಗುತ್ತಿದೆ. ಉಚಿತ ವಿದ್ಯುತ್ ಎಂದರು, ಈಗ ವಿದ್ಯುತ್ ದರ ಹೆಚ್ಚಳವಾಗಿದೆ.

Comments (0)

Your email address will not be published. Required fields are marked *

Back to top button