#Exclusive NewsTop Newsಮನರಂಜನೆಸಿನಿಮಾಸುದ್ದಿ

‘ರಾಬರ್ಟ್’ ಸಿನಿಮಾ ಬೀಟ್ ಮಾಡಲು ಹೋರಟಿದೆ ‘ಮ್ಯಾಕ್ಸ್’

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಬಾಕ್ಸ್ ಆಫೀಸ್​ನಲ್ಲಿ ಚಿತ್ರ ಒಳ್ಳೆಯ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಸಂಕ್ರಾಂತಿವರೆಗೆ ದೊಡ್ಡ ಸಿನಿಮಾಗಳ ಹವಾ ಇಲ್ಲ. ಅಲ್ಲಿವರೆಗೆ ‘ಮ್ಯಾಕ್ಸ್’ ಚಿತ್ರದ ಅಬ್ಬರ ಮುಂದುವರಿಯಲಿದೆ. ಈ ಸಿನಿಮಾ ಹಲವು ದಾಖಲೆಗಳನ್ನು ಪುಡಿ ಮಾಡಿದೆ. ಅದೇ ರೀತಿ, ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದ ಗಳಿಕೆಯನ್ನು ಈ ಸಿನಿಮಾ ಬೀಟ್ ಮಾಡುವ ಸನಿಹದಲ್ಲಿ ಇದೆ.

ಸದ್ಯ ‘ಮ್ಯಾಕ್ಸ್’ ಚಿತ್ರದ ಗಳಿಕೆ 40 ಕೋಟಿ ರೂಪಾಯಿ ಸಮೀಪಿಸಿದೆ. ಇನ್ನೊಂದು ವಾರದಲ್ಲಿ ಸುದೀಪ್ ಸಿನಿಮಾ ‘ರಾಬರ್ಟ್’ ಚಿತ್ರದ ಗಳಿಕೆಯನ್ನು ಹಿಂದಿಕ್ಕಲಿದೆ ಎಂಬುದು ಬಾಕ್ಸ್ ಆಫೀಸ್ ಪಂಡಿತರ ಲೆಕ್ಕಾಚಾರ. ದರ್ಶನ್ ನಟನೆಯ ಮತ್ತೊಂದು ಸೂಪರ್ ಹಿಟ್ ಚಿತ್ರ ‘ಕಾಟೇರ’ದ ಅಧಿಕೃತ ಕಲೆಕ್ಷನ್ 70 ಕೋಟಿ ರೂಪಾಯಿ ಆಸುಪಾಸಿನಲ್ಲಿ ಇದೆ. ಇದನ್ನು ಹಿಂದಿಕ್ಕಲು ‘ಮ್ಯಾಕ್ಸ್’ ಚಿತ್ರಕ್ಕೆ ಅಸಾಧ್ಯ ಎಂದು ಹೇಳಲಾಗುತ್ತಿದೆ.

‘ಮ್ಯಾಕ್ಸ್’ ಚಿತ್ರದಲ್ಲಿ ಸುದೀಪ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಅವರು ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಒಂದೇ ರಾತ್ರಿಯಲ್ಲಿ ನಡೆಯುವ ಕಥೆಯನ್ನು ಈ ಚಿತ್ರ ಹೊಂದಿದೆ. ಪೊಲೀಸ್ ಠಾಣೆಯಲ್ಲಿ ನಡೆಯುವ ರಾಜಕಾರಣಿ ಮಕ್ಕಳ ಕೊಲೆ ಹಾಗೂ ಅದನ್ನು ಸುದೀಪ್ ಹೇಗೆ ನಿರ್ವಹಿಸುತ್ತಾರೆ ಎಂಬುದೇ ಚಿತ್ರದ ಕಥೆ. ಈ ಸಿನಿಮಾಗೆ ಕಲೈಪ್ಪುಲಿ ಧಾನು ಬಂಡವಾಳ ಹೂಡಿದರೆ ವಿಜಯ್ ಕರ್ತಿಕೇಯ ಆ್ಯಕ್ಷನ್ ಕಟ್ ಹೇಳಿದ್ದಾರೆ. ಮೊದಲ ಸಿನಿಮಾದಲ್ಲೇ ಮೆಚ್ಚುಗೆ ಪಡೆದಿದ್ದಾರೆ.

Comments (0)

Your email address will not be published. Required fields are marked *

Back to top button