#Exclusive NewsTop Newsದೇಶ/ವಿದೇಶಸುದ್ದಿ

HMPV ವೈರಸ್​ನ ಸೋಂಕು ಭಾರತದಲ್ಲಿ ಪತ್ತೆಯಾಗಿಲ್ಲ : ಅತುಲ್ ಗೋಯಲ್

ನವದೆಹಲಿ : ಹೆಚ್ಎಂಪಿವಿ ಸೋಂಕು ಚೀನಾದಲ್ಲಿ ವ್ಯಾಪಕವಾಗಿದ್ದು, ಇದರ ಬೆನ್ನಲ್ಲೇ ಭಾರತದಲ್ಲೂ ಉಸಿರಾಟ ಸಂಬಂಧಿ ಆರೋಗ್ಯ ಸಮಸ್ಯೆಗಳ ಮೇಲೆ ನಿಗಾ ಇಡಲಾಗಿದೆ. ಸದ್ಯಕ್ಕೆ ಭಾರತದಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ಆತಂಕ ಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಆರೋಗ್ಯ ಸೇವೆಗಳ ಮಹಾನಿರ್ದೇಶಕರಾದ ಡಾ.ಅತುಲ್ ಗೋಯಲ್ ಅವರು ಪ್ರತಿಕ್ರಿಯೆ ನೀಡಿದ್ದು, ಹೆಚ್ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು. ದೇಶದಲ್ಲಿ 2024ರ ಡಿಸೆಂಬರ್ ನಲ್ಲಿ ಉಸಿರಾಟ ಸಂಬಂಧಿ ಸಮಸ್ಯೆಗಳು ಅಧಿಕ ಸಂಖ್ಯೆಯಲ್ಲಿ ವರದಿಯಾಗಿಲ್ಲ. ಪ್ರಸ್ತುತ ಪರಿಸ್ಥಿತಿ ಅಪಾಯಕಾರಿಯಾಗಿಲ್ಲ. ಒಂದೊಮ್ಮೆ ಸಮಸ್ಯೆ ಉಲ್ಬಣಿಸಿದರೂ ನಮ್ಮ ಆಸ್ಪತ್ರೆಗಳಲ್ಲಿ ಅದಕ್ಕೆ ಬೇಕಾದಷ್ಟು ವ್ಯವಸ್ಥೆಗಳು ಲಭ್ಯವಿದೆ ಎಂದು ಹೇಳಿದರು. ಇದೇ ವೇಳೆ ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಲು ಸಲಹೆ ನೀಡಿದರು.

ಸಾಮಾನ್ಯವಾಗಿ ಉಸಿರಾಟ ಸಂಬಂಧಿತ ಸಾಂಕ್ರಾಮಿಕ ರೋಗಗಳು ಮಕ್ಕಳು ಹಾಗೂ ಹಿರಿಯರಲ್ಲಿ ಅತೀ ಬೇಗನೆ ಕಾಣಿಸಿಕೊಳ್ಳುತ್ತದೆ. ಚೀನಾದಲ್ಲಿ ಚಳಿಗಾಲದಲ್ಲಿ ಈ ರೀತಿಯ ಕೆಲ ವೈರಸ್‌ಗಳು ಆತಂಕ ಸೃಷ್ಟಿಸುವುದು ಸಾಮಾನ್ಯವಾಗಿದೆ. ಕೆಲ ವೈರಸ್ ಹೆಚ್ಚು ತಲ್ಲಣ ಸೃಷ್ಟಿಸಲಿದೆ. ಕಳೆದ 5 ವರ್ಷದಲ್ಲಿ ಪ್ರತಿ ಚಳಿಗಾಲದಲ್ಲಿ ಚೀನಾದಲ್ಲಿ ಕೆಲ ವೈರಸ್ ಆತಂಕ ಸೃಷ್ಟಿಸಿದೆ. ಆದರೆ, ಇದರಿಂದ ಭಾರತಕ್ಕೆ ಯಾವುದೇ ಆತಂಕವಿಲ್ಲ.

 

Comments (0)

Your email address will not be published. Required fields are marked *

Back to top button