#Exclusive NewsTop Newsಕ್ರೈಂ ಸ್ಟೋರಿಸುದ್ದಿ
ತಾಯಿಯನ್ನು ಕೊಂದು …ಮಗನು ನೇಣಿಗೆ ಶರಣು…!

ಅನೇಕಲ್ : ತಾಯಿಯನ್ನು ಕೊಂದು ಬಳಿಕ ಮಗನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ನಡೆದಿದೆ. ಮಹಾಲಕ್ಷ್ಮಿ (41) ಕೊಲೆಯಾದ ಮಹಿಳೆ. ರಮೇಶ್ (21) ತಾಯಿಯನ್ನ ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ಮಗ.
ಚಿತ್ರದುರ್ಗ ಮೂಲದ ಚಳ್ಳಕೆರೆಯ ಚಿಕ್ಕಹಳ್ಳಿ ಕುಟುಂಬ, ಕಳೆದ ಕೆಲ ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ಬಂದಿದ್ದರು.ಕುಟುಂಬ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಮಗ ಕುಡಿದು ಬಂದು ಆಗಾಗ್ಗೆ ಗಲಾಟೆ ಮಾಡುತ್ತಿದ್ದ. ನಿನ್ನೆ ರಾತ್ರಿಯೂ ಕುಡಿದು ಬಂದು ತಾಯಿ ಮಹಾಲಕ್ಷ್ಮಿ ಜೊತೆ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಮೊಬೈಲ್ ಚಾರ್ಜಿಂಗ್ ವೈರ್ನಿಂದ ಕುತ್ತಿಗೆಗೆ ಬಿಗಿದು ತಾಯಿ ಹತ್ಯೆ ಮಾಡಿದ್ದಾನೆ.




