Tuesday, January 27, 2026
24 C
Bengaluru
Google search engine
LIVE
ಮನೆ#Exclusive Newsಗದಗ : ’’ಬಾನಾಡಿಗಳ ಸ್ವರ್ಗ ಮಾಗಡಿ ಕೆರೆ’’

ಗದಗ : ’’ಬಾನಾಡಿಗಳ ಸ್ವರ್ಗ ಮಾಗಡಿ ಕೆರೆ’’

ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿರುವ ಗದಗ ಜಿಲ್ಲೆಯ ಮಾಗಡಿ ಕೆರೆಗೆ ಪ್ರತಿವರ್ಷದಂತೆ ಈ ವರ್ಷವೂ ವಿದೇಶಗಳಿಂದ ಹಕ್ಕಿಗಳು ಬಂದಿದ್ದು, ಕೆರೆಯ ಸೌಂದರ್ಯವನ್ನು ಇಮ್ಮಡಿಗೊಳಿಸಿವೆ.  ಉತ್ತರ ಕರ್ಣಾಟಕದ ರಂಗನತಿಟ್ಟು ಎಂದು ಕರೆಯುವ 138 ಎಕರೆ ವಿಸ್ತಾರದ ಮಾಗಡಿ ಕೆರೆಗೆ ಪ್ರತಿವರ್ಷ ಚಳಿಗಾಲದಲ್ಲಿ ಸಾವಿರಾರು ವಿದೇಶಿ ಪಕ್ಷಿಗಳು ಬರುತ್ತವೆ.

ನೇಸರನ ಆಗಮನದ ಬೆನ್ನಲ್ಲೇ ವಿಶಾಲ ಕೆರೆಯ ಸುತ್ತಮುತ್ತ ವಿದೇಶಿ ಹಕ್ಕಿಗಳ ಕಲರವ ನೋಡಲು ಸಂಭ್ರಮ. ಬೆಳಿಗ್ಗೆಯಿಂದ ಸಂಜೆಯವರೆಗೂ ಈ ವಲಸೆ ಪಕ್ಷಿಗಳ ಸಾಮ್ರಾಜ್ಯ ಎಂಥವರನ್ನು ಬೆರಗು ಮೂಡಿಸುತ್ತದೆ.

ಮಾಗಡಿಯಲ್ಲಿ 138 ಎಕರೆ ವಿಸ್ತಾರದ ಈ ಕೆರೆಯಲ್ಲಿ 23 ವರ್ಷಗಳಿಂದ, ಇಟಲಿ, ರಷ್ಯಾ, ಬಾಂಗ್ಲಾದೇಶ, ನೇಪಾಳ, ಸೈಬೇರಿಯಾ, ಮಲೇಷಿಯಾ, ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಲಡಾಕ್​, ಟಿಬೆಟ್ ಗಳಿಂದ ಸಹಸ್ರಾರು ಪಕ್ಷಿಗಳು ಬರುತ್ತಿವೆ. ಇವುಗಳ ಕಲರವ ಪ್ರತಿವರ್ಷ ಕೆರೆಗೆ ರಂಗೇರಿಸುತ್ತಿದೆ. ಜೊತೆಗೆ ಈ ಪಕ್ಷಿಗಳು ನೋಡುಗರನ್ನು ಕೈಬಿಸಿ ಕರೆಯುತ್ತಿವೆ.ಈ ವಿದೇಶಿ ಬಾನಾಡಿಗಳನ್ನು ನೋಡಲು ರಾಜ್ಯದ ನಾನಾ ಭಾಗಗಳಿಂದ ಶಾಲಾ- ಕಾಲೇಜು ವಿದ್ಯಾರ್ಥಿಗಳು,  ಪಕ್ಷಿ ಪ್ರೇಮಿಗಳು ಸಾಕಷ್ಟು ಜನ ಬರುತ್ತಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments