#Exclusive NewsTop Newsರಾಜ್ಯಸುದ್ದಿ
ಹಿರಿಯ ಸಾಹಿತಿ ‘‘ನಾ.ಡಿ‘‘ ಸ್ತಬ್ಧ ; ಡಾ. ನೋರ್ಬೆರ್ಟ್ ಡಿಸೋಜ

ಮಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಡಾ. ನೋರ್ಬೆರ್ಟ್ ಡಿಸೋಜ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 88 ವರ್ಷದ ಡಿಸೋಜ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ 7.50ಕ್ಕೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತ ನಾ.ಡಿಸೋಜ ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಸಾಗರದ ನಗರಸಭೆ ಆವರಣದಲ್ಲಿರುವಂತ ಗಾಂಧಿ ಮೈದಾನದಲ್ಲಿ ಡಿಸೋಜಾ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ನಾ.ಡಿಸೋಜ ಅವರ ಪುತ್ರ ನವೀನ್ ಡಿಸೋಜ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ತಂದೆಯ ನಿಧನದ ಮಾಹಿತಿ ಪ್ರಕಟಿಸಿದ್ದಾರೆ. ಹಿರಿಯ ಸಾಹಿತಿ ನಾ.ಡಿಸೋಜ ನಿಧನದ ವಿಷಯ ತಿಳಿಯುತ್ತಿದ್ದಂತೆ ರಾಜ್ಯದ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.




