#Exclusive NewsTop Newsರಾಜಕೀಯರಾಜ್ಯಸುದ್ದಿ

ಬಿಜೆಪಿ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು..!

ಬೆಂಗಳೂರು: ಪರಿಚಿತ ಯುವತಿಗೆ ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಹಾಸನ ಜಿಲ್ಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರೊಬ್ಬರ ಮೇಲೆ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಯನಗರದ ನಿವಾಸಿ ಸೋಮಶೇಖರ್ ಅಲಿಯಾಸ್ ಜಿಮ್ ಸೋಮನ ಮೇಲೆ ಆರೋಪ ಕೇಳಿ ಬಂದಿದ್ದು, ಕೃತ್ಯ ಬೆಳಕಿಗೆ ಬಂದ ಬಳಿಕ ತಲೆಮರೆಸಿಕೊಂಡಿರುವ ಆರೋಪಿ ಪತ್ತೆಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.

ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ ಫ್ಲ್ಯಾಟ್‌ವೊಂದಕ್ಕೆ ಕರೆದೊಯ್ದು ಬಲವಂತದಿಂದ ಮದ್ಯ ಕುಡಿಸಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ 26 ವರ್ಷದ ಯುವತಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಆರೋಪಿ ತಲೆಮರೆಸಿಕೊಂಡಿದ್ದಾರೆ.

ಸಂತ್ರಸ್ತೆಗೆ ಮದುವೆ ನಿಶ್ಚಯವಾಗಿತ್ತು. ಅದೇ ವೇಳೆಯಲ್ಲಿ ಸಂತ್ರಸ್ತೆಗೆ ಆಕೆಯ ಸ್ನೇಹಿತೆ ಮೂಲಕ‌ ಸೋಮಶೇಖರ್ ಪರಿಚಯವಾಗಿತ್ತು. ಹೀಗಾಗಿ ₹6 ಲಕ್ಷ ಆರ್ಥಿಕ ಸಹಾಯ ಮಾಡುವಂತೆ ಸೋಮಶೇಖರ್ ಬಳಿ ಸಂತ್ರಸ್ತೆ ಕೇಳಿಕೊಂಡಿದ್ದರು.

Comments (0)

Your email address will not be published. Required fields are marked *

Back to top button