Thursday, January 29, 2026
16.4 C
Bengaluru
Google search engine
LIVE
ಮನೆ#Exclusive Newsತಿರುಪತಿಯಲ್ಲಿ ಕಾಲ್ತುಳಿತ ದುರಂತ ; ಭಕ್ತರ ಸಾವು..!

ತಿರುಪತಿಯಲ್ಲಿ ಕಾಲ್ತುಳಿತ ದುರಂತ ; ಭಕ್ತರ ಸಾವು..!

ತಿರುಮಲದಲ್ಲಿ  ಬುಧವಾರ ರಾತ್ರಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಿರ್ಮಲಾ (50) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಾಲ್ತುಳಿತ ದುರಂತದಲ್ಲಿ ಐವರು ಮಹಿಳೆಯರು ಮತ್ತು ಓರ್ವ ಪುರುಷ ಸೇರಿದಂತೆ ಒಟ್ಟು 6 ಮಂದಿ ಸಾವನ್ನಪ್ಪಿದ್ದಾರೆ.

ವಿಶಾಖಪಟ್ಟಣದ ರಜನಿ (47), ಲಾವಣ್ಯ (40), ಶಾಂತಿ (34) ಆಂಧ್ರದ ನರಸೀಪಟ್ಟಣಂ ನಿವಾಸಿ ಬೊದ್ದೇಟಿ ನಾಯ್ಡುಬಾಬು ಹಾಗೂ ತಮಿಳುನಾಡಿನ ಸೇಲಂ ನಿವಾಸಿ ಮಲ್ಲಿಕಾ ಮೃತ ದುರ್ದೈವಿಗಳು. 48 ಜನರಿಗೆ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ತಿರುಪತಿಗೆ ತೆರಳುತ್ತಿದ್ದಾರೆ.

ಜನವರಿ 10 ರಿಂದ 14ರವರೆಗೆ ವೈಕುಂಠ ದ್ವಾರ ದರ್ಶನಕ್ಕೆ ಉಚಿತ ಟಿಕೆಟ್ ವಿತರಣೆ ಹಿನ್ನೆಲೆ ಟಿಕೆಟ್ ಪಡೆಯಲು ನೂಕುನುಗ್ಗಲು ಉಂಟಾಗಿದೆ. ಟಿಟಿಡಿಯಿಂದ ಒಟ್ಟು 7 ಲಕ್ಷ ಟಿಕೆಟ್ ವಿತರಣೆ ಕಾರ್ಯ ನಡೆಯುತ್ತಿತ್ತು. ಉಚಿತ ಟಿಕೆಟ್ ಪಡೆಯುವ ಸಲುವಾಗಿ ಸಾಗರೋಪಾದಿಯಲ್ಲಿ ಭಕ್ತರು ಕೌಂಟರ್ ಬಳಿ ಸೇರಿದ ಪರಿಣಾಮ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ.

ಇನ್ನು ತಿರುಪತಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಸಿಎಂ ಚಂದ್ರಬಾಬು ನಾಯ್ಡು ಭೇಟಿ ನೀಡಲಿದ್ದು, ಮೃತ ಕುಟುಂಬಗಳಿಗೆ ಸಾಂತ್ವನ ಹೇಳಲಿದ್ದಾರೆ. ಅಲ್ಲದೇ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ. ಘಟನಾ ಸ್ಥಳಕ್ಕೂ ತೆರಳಿ ಮಾಹಿತಿ ಪಡೆಯಲಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments