#Exclusive NewsTop Newsರಾಜಕೀಯರಾಜ್ಯಸುದ್ದಿ

ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭ ಫಿಕ್ಸ್ ; ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಎಂದರೆ ಮೂಗು ಮುರಿಯುವರೇ ಹೆಚ್ಚು. ಅಭಿವೃದ್ಧಿ ಕಾಣದ ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈ ಬಾರಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಸಲಿದೆ. ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಯ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆಯಲಿದೆ. ಈ ವಿಚಾರವಾಗಿ ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ ವೆಂಕಟೇಶ್ ಮಾಹಿತಿ ನೀಡಿದ್ದಾರೆ.

ಸಚಿವ ಸಂಪುಟ ಸಭೆ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲೆಗೆ ಅಗತ್ಯವಿರುವ ಮೂಲ ಸೌಕರ್ಯ ನಿವಾರಣೆ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ನಗರ ಮತ್ತು ಪಟ್ಟಣ ಪ್ರದೇಶಗಳಿಗೆ ಸಂಪೂರ್ಣ ಒಳಚರಂಡಿ ವ್ಯವಸ್ಥೆ, ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ‌‌. ಗ್ರಾಮಾಂತರ ಮತ್ತು ನಗರ, ಪಟ್ಟಣ ಪ್ರದೇಶಗಳಿಗೆ ಪರಿಪೂರ್ಣ ಮೂಲ ಸೌಕರ್ಯ, ಹಾಡಿ ಜನರಿಗೆ ಮೂಲ ಸೌಕರ್ಯದ ಕುರಿತು ಪರಿಹಾರ ಸಿಗುವ ನಿರೀಕ್ಷೆಯಿದೆ ಎಂದು ಸಚಿವರು ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button