ರಸ್ತೆಗೆ ನನ್ನ ಹೆಸರಿಡಿ ಎಂದು ನಾನು ಯಾರಿಗೂ ಹೇಳಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು 40 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಯಾರಿಗೂ ನನ್ನ ಹೆಸರಡಿ ಎಂದು ಹೇಳಿಲ್ಲ.
ಮೈಸೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಕೊಟ್ಟಾಗಲೇ ನಾನು ಬೇಡ ಅಂದೆ. ಡಾಕ್ಟರೇಟ್ ತೆಗೆದುಕೊಳ್ಳುವಷ್ಟು ನನಗೆ ಯೋಗ್ಯತೆ ಇಲ್ಲ ಎಂದು ಹೇಳಿದ್ದೆ. ಆ ರಸ್ತೆಗೆ ಬೇರೆ ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ. ಹೆಸರಿಡುವ ವಿಚಾರವಾಗಿ ನಾನು ಯಾರ ಜೊತೆಯೂ ಚರ್ಚೆಯನ್ನೂ ಮಾಡಿಲ್ಲ” ಎಂದು ಹೇಳಿದರು.