ವಕ್ಫ್ ಬೋರ್ಡ್ ಸಮಸ್ಯೆ ; ಶ್ರೀರಂಗಪಟ್ಟಣದಲ್ಲಿ ಪಹಣಿ ಸುಟ್ಟು ಪ್ರತಿಭಟನೆ..!

ವಕ್ಫ್ ಬೋರ್ಡ್ ಸಮಸ್ಯೆ ದಿನೇ ದಿನೇ ಉಲ್ಬಣಿಸುತ್ತಿದ್ದು,ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ದ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣದ ಕುವೆಂಪು ವೃತ್ತದ ಬಳಿಯ ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ವಕ್ಫ್ ಬೋರ್ಡ್ ಹಾಗೂ ಜಮೀರ್ ಅಹಮದ್ ವಿರುದ್ದ ಘೋಷಣೆ ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಿದರು.ಕೈಯಲ್ಲಿ ಕಬ್ಬಿನ ಜೊಲ್ಲೆ ಹಿಡಿದು, ಹೆದ್ದಾರಿಯಲ್ಲಿ RTC ಸುಟ್ಟು , ಉರುಳು ಸೇವೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು.
ಸರ್ಕಾರಿ ಶಾಲೆ ಮೇಲೂ ವಕ್ಫ್ ದೃಷ್ಟಿ..!
ಶ್ರೀರಂಗಪಟ್ಟಣ ತಾಲೂಕಿನ ಚಂದಗಾಲು ಗ್ರಾಮದಲ್ಲಿನ ಸರ್ಕಾರಿ ಶಾಲೆಯ ಸರ್ವೆ ನಂ 215ರ 30 ಗುಂಟೆ ಜಮೀನಲ್ಲಿ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದು ಆಗಿತ್ತು. ವಕ್ಫ್ ಆಸ್ತಿ ಅಂತ 2015ರಲ್ಲೇ ಆಗಿದ್ದು, ಪಹಣಿ ಪರಿಶೀಲಿಸಿದಾಗ ತಿಳಿದುಬಂದಿತ್ತು. ವಕ್ಫ್ ಮಂಡಳಿ ಶಾಲೆ ಜಾಗ ಕಬಳಿಕೆಗೆ ಮುಂದಾಗಿದೆ ಎಂದು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದರು. ವಕ್ಫ ಆಸ್ತಿ ಅಂತ ನಮೂದು ಆಗಿದ್ದನ್ನು ಬದಲಾಯಿಸುವಂತೆ ಒತ್ತಾಯಿಸಿದ್ದರು.




