Top Newsರಾಜಕೀಯರಾಜ್ಯಸುದ್ದಿ

ಮುಸ್ಲಿಮರ ಮನೆ ಮುಂದೆ ಹಂದಿ ಕಡಿದು ತಿಂತೀವಿ ಎಂದ ಮುತಾಲಿಕ್ ವಿರುದ್ಧ ವಿರುದ್ಧ ಎಫ್‌ಐಆರ್‌

ಹಾಸನ: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಅವರು ಯಾವಾಗಲೂ ಪ್ರಚೋದನಕಾರಿ ಭಾಷಣ ಮಾಡುತ್ತಲೇ ಆಗಾಗ ಸುದ್ದಿಯಲ್ಲಿ ಇರುತ್ತಾರೆ. ಇದೀಗ ಮತ್ತೆ ಅಂತಹದ್ದೇ ಪ್ರಚೋದನಕಾರಿ ಭಾಷಣ ಮಾಡುವ ಮೂಲಕ ಸದ್ದು ಮಾಡಿದ್ದಾರೆ. ಇನ್ನು  ಮುತಾಲಿಕ್ ಹೇಳಿಕೆ ಹಿನ್ನೆಲೆ ಅವರ ವಿರುದ್ಧ ಸಕಲೇಶಪುರ ನಗರ ಪೊಲೀಸ್‌‍ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿದೆ.

ಜನವರಿ 9ರಂದು ಸಕಲೇಶಪುದರಲ್ಲಿ ನಡೆದಿದ್ದ ವಿರಾಟ್‌ ಹಿಂದೂ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಪ್ರಮೋದ್‌ ಮುತಾಲಿಕ್‌ ಅವರು, ಹಿಂದೂಗಳು ಮುಸ್ಲಿಂರಿಗೆ ಕುರಿಮಾಂಸ ಎಂದು ಹೇಳಿ ಕೊಡಿ ಅವರು ಹಲಾಲ್‌ ಆಗಿಲ್ಲ ಎಂದು ತಿನ್ನುವುದಿಲ್ಲ, ಆದರೆ ಹಿಂದೂಗಳು ಮುಸ್ಲಿಂ ಹೋಟೆಲ್‌ಗಳಿಗೆ ಹೋಗಿ ಹಲಾಲ್‌ ಮಾಡಿರುವ ಮಾಂಸವನ್ನು ಚಪ್ಪರಿಸಿಕೊಂಡು ತಿಂತಾರೆ. ಅದು ಸಗಣಿ ತಿಂದಂಗೆ, ಇದು ಸರಿನಾ ಎಂದು ಮುತಾಲಿಕ್‌ ಪ್ರಶ್ನೆ ಮಾಡಿದ್ದಾರೆ.

2003 ರಲ್ಲಿ ಸಕಲೇಶಪುರದಲ್ಲಿ ಹಿಂದೂಗಳ ಏರಿಯಾದಲ್ಲಿ ಮುಸ್ಲಿಂ ಸಮುದಾಯದವರು ಒಂದು ಗೋಮಾಂಸದ ಅಂಗಡಿಯನ್ನು ತೆರೆದಿದ್ದರು. ಆಗ ಹಿಂದೂಗಳು ಸುಮನೆ ಇರಲಿಲ್ಲ. ಅದೇ ಅಂಗಡಿಯ ಎದುರು ಒಂದು ಹಂದಿಮಾಂಸದ ಅಂಗಡಿಯನ್ನು ತೆರೆದರು.

ಮುಸ್ಲಿಂರು ಏನಾದರು ದನದ ಮಾಂಸದ ಅಂಗಡಿಯನ್ನು ತೆರೆದರೆ ನಿಮ ಮನೆಯ ಮುಂದೆ ಹಂದಿ ಕಡಿದು ತಿಂತೀವಿ. ನಮ ಸಹನೆಗೆ ಒಂದು ಮಿತಿ ಬೇಡವಾ ಆಕಳ ರಕ್ತ, ನಮ ರಕ್ತ, ಮುಂದಿನ ದಿನಗಳಲ್ಲಿ ನಾವು ಗೋಮಾತೆ ರಕ್ಷಣೆ ಮಾಡುತ್ತೇವೆ ಎಂದಿದ್ದ ಪ್ರಮೋದ್‌ ಮುತಾಲಿಕ್‌.

ಸಮಾಜದ ಶಾಂತಿ ಹಾಳು ಮಾಡುವ ಉದ್ದೇಶ ಹಾಗು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಎಫ್‌ಐಆರ್‌ ದಾಖಲಿಸಲಾಗಿದೆ.

ಮುತಾಲಿಕ್ ವಿರುದ್ಧ ಎಫ್‌ಐಆರ್ ದಾಖಲು

ಇದೀಗ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಪ್ರಮೋದ್‌ ಮುತಾಲಿಕ್‌ ಹಾಗೂ ಕಾರ್ಯಕ್ರಮ ಆಯೋಜನೆ ಮಾಡಿದವರ ವಿರುದ್ಧ ಸಕಲೇಶಪುರ ನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುಪ್ತ ಮಾಹಿತಿ ಸಿಬ್ಬಂದಿ ಶ್ರೀಧರ್‌ ಎಂ.ಕೆ ಅವರು ಪೊಲೀಸ್‌‍ ಠಾಣೆಗೆ ದೂರು ನೀಡಿದ್ದು ಬಿಎನ್‌ಎಸ್‌‍ 2023, U/S-196 (1), 353 (2), 3 (5) ಅಡಿ ಪ್ರಕರಣ ದಾಖಲಾಗಿದೆ.

Comments (0)

Your email address will not be published. Required fields are marked *

Back to top button