ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್ ಕೇಸ್ನಲ್ಲಿ ನಿರಪರಾಧಿ ಎಂಬುದು ಸಾಬೀತಾಗಿದೆ. ನಟಿಯ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ. ಇದರಿಂದ ರಾಗಿಣಿ ಅವರು ರಿಲೀಫ್ ಆಗಿದ್ದಾರೆ.
ಹೌದು.. ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದಲ್ಲಿ ನಂಟು ಹೊಂದಿದ ಆರೋಪದ ಮೇರೆಗೆ ಬಂಧನಕ್ಕೀಡಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟಿ ರಾಗಿಣಿ ಇದ್ದರು.2020ರ ಸೆಪ್ಟೆಂಬರ್ನಲ್ಲಿ ರಾಗಿಣಿ ಅವರನ್ನು ಬಂಧಿಸಲಾಗಿತ್ತು. ಅವರು ಹಲವು ದಿನ ಜೈಲಿನಲ್ಲೂ ಕೂಡ ಇದ್ದರು.
ರಾಗಿಣಿ ದ್ವಿವೇದಿ ಅವರು ‘ಕೆಂಪೇಗೌಡ’ ರೀತಿಯ ಸಿನಿಮಾ ಮಾಡಿ ಗಮನ ಸೆಳೆದವರು. ‘ತುಪ್ಪ ಬೇಕಾ ತುಪ್ಪ..’ ಹಾಡಿಗೆ ಡ್ಯಾನ್ಸ್ ಮಾಡಿ ತುಪ್ಪದ ಹುಡುಗಿ ಎಂದೇ ಫೇಮಸ್ ಆದರು. ಡ್ರಗ್ಸ್ ಕೇಸ್ ಅವರ ವೃತ್ತಿ ಜೀವನಕ್ಕೆ ದೊಡ್ಡ ಕಪ್ಪು ಚುಕ್ಕಿ ಆಗಿತ್ತು. ಆದರೆ, ಈಗ ಅವರು ಆರೋಪ ಮುಕ್ತರಾಗಿದ್ದಾರೆ.