#Exclusive NewsTop Newsಜಿಲ್ಲೆರಾಜಕೀಯರಾಜ್ಯಸುದ್ದಿ

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಮರಕ್ಕೆ ಡಿಕ್ಕಿ ; ಪ್ರಾಣಾಪಾಯದಿಂದ ಪಾರಾದ ಸಚಿವೆ

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ವರ್ಷದ ಮೊದಲ ಹಬ್ಬ ಸಂಕ್ರಾಂತಿ ದಿನದಂದು  ಬೆಳಗಿನ ಜಾವ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದೆ.

ನಾಯಿ ಅಡ್ಡ ಬಂದಿದ್ದನ್ನ ತಪ್ಪಿಸಲು ಹೋಗಿ ರಸ್ತೆಯ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಸಚಿವೆ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಆದರೆ, ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Comments (0)

Your email address will not be published. Required fields are marked *

Back to top button