Top Newsಕ್ರೈಂ ಸ್ಟೋರಿರಾಜ್ಯಸುದ್ದಿ

ಪ್ರೀತಿ ಕಿರುಕುಳದಿಂದ 9ನೇ ಕ್ಲಾಸ್‌ ವಿದ್ಯಾರ್ಥಿನಿ ಆತ್ಮಹತ್ಯೆ

ಗದಗ: ಪ್ರೀತಿ, ಪ್ರೇಮ ವಿಚಾರವಾಗಿ 15 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ.

9ನೇ ತರಗತಿ ಓದುತ್ತಿದ್ದ ಖುಷಿ ಆತ್ಮಹತ್ಯೆಗೆ ಶರಣಾದ ಬಾಲಕಿ ಗುರುತಿಸಲಾಗಿದೆ.  ಇನ್ನು ಖುಷಿ ಯಾರು ಇಲ್ಲದ ವೇಳೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿದ್ದಾಳೆ.

ವಿದ್ಯಾರ್ಥಿಗಳಾದ  18 ವರ್ಷದ ಮುತ್ತುರಾಜ್ ಮ್ಯಾಗೇರಿ ಹಾಗೂ 19 ವರ್ಷದ ಜುನೇದಸಾಬ್ ಕಂದಗಲ್ ಅವರ ಪ್ರೀತಿಸುವಂತೆ ದಿನ ನಿತ್ಯ ಮಾನಸಿಕವಾಗಿ ಕಿರುಕುಳ ನಿಡುವುದರಿದ ಖುಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಈ ಇಬ್ಬರು ಸೇರಿ ಈ ಖುಷಿಯನ್ನು ಲವ್ ಮಾಡ್ತಿದ್ದರು. ಈ ವಿಷಯ ಗೊತ್ತಾಗಿ ಇಬ್ಬರಿಗೂ ತಾಕೀತು ಮಾಡಲಾಗಿತ್ತು. ಆದರೂ ಇಬ್ಬರು ಆಗಾಗ ಭೇಟಿಯಾಗಿ ಮಾತನಾಡಿ ಟಾರ್ಚರ್‌ ನೀಡುತ್ತಿದ್ದರು. ಈ ಟಾರ್ಚರ್‌ನಿಂದ ಬೇಸತ್ತು ಬಾಲಕಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ದೂರಿದ್ದಾರೆ.

ವಿದ್ಯಾರ್ಥಿಗಳಾದ ಜಿನೇದಸಾಬ್ ಹಾಗೂ ಮುತ್ತುರಾಜ್ ವಿರುದ್ಧ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Comments (0)

Your email address will not be published. Required fields are marked *

Back to top button