Top Newsಕ್ರೈಂ ಸ್ಟೋರಿಸುದ್ದಿ

ಅಮೆರಿಕದಲ್ಲಿ ಗುಂಡಿಕ್ಕಿ ಹೈದರಾಬಾದ್‌ ಮೂಲದ ಯುವಕ ಬಲಿ !

ವಾಷಿಂಗ್ಟನ್: ಹೈದರಾಬಾದ್‌ ಮೂಲದ 26 ವರ್ಷದ ವಿದ್ಯಾರ್ಥಿಯನ್ನು ಅಮೆರಿಕದ ವಾಷಿಂಗ್ಟನ್‌ನ ಪೆಟ್ರೋಲ್‌ ಸ್ಟೇಶನ್‌ ಬಳಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ.

    ಮೃತ ವಿದ್ಯಾರ್ಥಿಯನ್ನುರವಿತೇಜ (26) ಎಂದು ಗುರುತಿಸಲಾಗಿದ್ದು, ಅವರು ಹೈದರಾಬಾದ್‌ನ ಚೈತನ್ಯಪುರಿ ಪ್ರದೇಶದ ಆರ್‌ಕೆ ಪುರಂನವರು ಎಂದು ಮೂಲಗಳು ತಿಳಿಸಿವೆ. ಸ್ನಾತಕೋತ್ತರ ಪದವಿಗಾಗಿ ಅಮೆರಿಕಕ್ಕೆ ಹೋಗಿದ್ದ ರವಿತೇಜ ಇತ್ತೀಚೆಗಷ್ಟೇ ಕೋರ್ಸ್ ಮುಗಿಸಿದ್ದು,ಉದ್ಯೋಗದ ಹುಡುಕಾಟದಲ್ಲಿದ್ದರು ಎನ್ನಲಾಗಿದೆ.

ಸ್ಥಳೀಯ ಪೊಲೀಸರು ದಾಳಿಯ ಹಿಂದಿನ ಉದ್ದೇಶವನ್ನು ತನಿಖೆ ಮಾಡುತ್ತಿದ್ದಾರೆ ಮತ್ತು ದುಷ್ಕರ್ಮಿಗಳನ್ನು ಗುರುತಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಲ್ಲಿ ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳು ಕೊಲ್ಲಲ್ಪಟ್ಟ ಹಲವಾರು ಘಟನೆಗಳು ಬೆಳಕಿಗೆ ಬಂದಿವೆ.

Comments (0)

Your email address will not be published. Required fields are marked *

Back to top button