Top Newsರಾಜ್ಯಸುದ್ದಿ

ಲಾರಿ ಪಲ್ಟಿಯಾಗಿ 10 ಮಂದಿ ಸ್ಥಳದಲ್ಲೇ ಸಾವು

ಉತ್ತರ ಕನ್ನಡ: ಲಾರಿ ಪಲ್ಟಿಯಾಗಿ 10 ಜನ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಘಟನೆಯಲ್ಲಿ 13 ಜನರಿಗೆ ಗಂಭೀರ ಗಾಯಗಳಾಗಿವೆ. ಲಾರಿಯು ಸವಣೂರಿನಿಂದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕಡೆ ಹೋಗುತ್ತಿತ್ತು ಎಂದು ತಿಳಿದುಬಂದಿದೆ.

ಮೃತರನ್ನು ಫಯಾಜ್ ಇಮಾಮ್ ಸಾಬ್ ಜಮಖಂಡಿ (45), ವಾಸೀಮ್ ವಿರುಲ್ಲಾ ಮುಡಗೇರಿ (35), ಇಜಾಜ್ ಮುಸ್ತಕಾ ಮುಲ್ಲಾ (20), ಸಾದೀಕ್ ಭಾಷ್ ಫಾರಷ್ (30), ಗುಲಾಮ್ಉಷೇನ್ ಜವಳಿ (40), ಇಮ್ತಿಯಾಜ್ ಮಮಜಾಪರ್ ಮುಳಕೇರಿ (36), ಅಲ್ಪಾಜ್ ಜಾಫರ್ ಮಂಡಕ್ಕಿ (25), ಜೀಲಾನಿ ಅಬ್ದುಲ್ ಜಖಾತಿ (25) ಅಸ್ಲಂ ಬಾಬುಲಿ ಬೆಣ್ಣಿ (24) ಎಂದು ಗುರ್ತಿಸಲಾಗಿದೆ.

ಮೃತರು ಹಾವೇರಿ ಜಿಲ್ಲೆ ಸವಣೂರು ಮೂಲದವರೆಂಬ ಮಾಹಿತಿ ದೊರೆತಿದೆ. ನಸುಕಿನ‌ ಜಾವ ರಸ್ತೆಯಲ್ಲಿ ಮಂಜು ಮುಸುಕಿದ್ದರಿಂದ ಲಾರಿ ಪಲ್ಟಿಯಾಗಿದೆ. ಘಟನಾ ಸ್ಥಳಕ್ಕೆ ಯಲ್ಲಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ರೇನ್ ಮೂಲಕ ಶವಗಳನ್ನು ಹೊರತೆಗೆಯಲಾಗುತ್ತಿದೆ. ಘಟನಾ ಸ್ಥಳಕ್ಕೆ ಎಸ್​ಪಿ ನಾರಾಯಣ್​​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜತೆಗೆ, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

ಗಾಯಾಳುಗಳಿಗೆ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಭೇಟಿ ನೀಡಿದ ಸ್ಥಳೀಯ ಶಾಸಕ ಶಿವರಾಮ ಹೆಬ್ಬಾರ್, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಮೃತ ದೇಹಗಳನ್ನ ಆದಷ್ಟು ಶೀಘ್ರವಾಗಿ ಮೃತರ ಊರಿಗೆ ಸಾಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು

 

 

Comments (0)

Your email address will not be published. Required fields are marked *

Back to top button