ಬೀದರ್ : ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಯಡವಟ್ಟಿನಿಂದ ಹೆರಿಗೆ ವೇಳೆ ನವಜಾತ ಶಿಶುವಿನ ಬಲಗಾಲ ಮೂಳೆಯೇ ಮುರಿದಿದೆ. ಹೆರಿಗೆ ಬಳಿಕ ಸ್ಕ್ಯಾನಿಂಗ್ ಮಾಡಿಸಿದಾಗ ಬಲಗಾಲಿನ ತೊಡೆಯ ಮೂಳೆ ಮುರಿದಿರುವುದು ಬೆಳಕಿಗೆ ಬಂದಿದೆ.
ಮೂಳೆ ಮುರಿತದಿಂದಾಗಿ ಒಂದು ತಿಂಗಳ ಹಸುಗೂಸು ನೋವು ತಾಳಲಾರದೇ ನರಳಾಡುತ್ತಿದೆ. ಹಸುಗೂಸಿನ ಚಿಕಿತ್ಸೆಗಾಗಿ ಬಡ ಕುಟುಂಬ ಪರದಾಡುತ್ತಿದ್ದು, ಶಾಶ್ವತ ಅಂಗವೈಕಲ್ಯದ ಭೀತಿ ಶುರುವಾಗಿದೆ.ಹದಿನೈದು ದಿನದ ಅಂತರದಲ್ಲಿ ಎರಡು ಹಸುಗೂಸುಗಳ ಮೂಳೆ ಮುರಿತ ಕಂಡು ಬಂದಿದೆ.ಟ್ರೇನಿ ನರ್ಸಗಳು ಹೆರಿಗೆ ಮಾಡಿದ್ದರಿಂದ ಈ ಯಡವಟ್ಟು ಸಂಭವಿಸಿದೆ.