ಮುಂಬೈ: ಮಹಾರಾಷ್ಟ್ರದಲ್ಲಿ ರೈಲಿನಡಿ ಸಿಲುಕಿ 7 ಜನರ ದುರಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡಿದ ಎಂಬ ಸುದ್ದಿ ಹರಡುತ್ತಿದ್ದಂತೆ ಪುಷ್ಪಕ್ ಎಕ್ಸ್ಪ್ರೆಸ್ನಲ್ಲಿದ್ದ ಕೆಲವು ಪ್ರಯಾಣಿಕರು ರೈಲಿನ ಚೈನ್ ಎಳೆದು ರೈಲು ನಿಲ್ಲಿಸಿ ಪಕ್ಕದ ಹಳಿಗೆ ಜಿಗಿದಿದ್ದಾರೆ. ಈ ವೇಳೆ ಮತ್ತೊಂದು ಹಳಿಯಲ್ಲಿ ಬರುತ್ತಿದ್ದ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಡಿಕ್ಕಿಯಾಗಿದೆ. ಜಲಗಾಂವ್‌ನ ಪಚೋರಾ ರೈಲು ನಿಲ್ದಾಣದಲ್ಲಿ ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿ ಹರಡಿ ಗೊಂದಲ ಸೃಷ್ಟಿಯಾಯಿತು. ಇದರಿಂದ ಚಲಿಸುತ್ತಿದ್ದ ರೈಲಿನಿಂದ ಪ್ರಯಾಣಿಕರು ಹೊರಗೆ ಹಾರಿದರು, ಆಗ ಪಕ್ಕದ ಹಳಿಯಲ್ಲಿ ಕರ್ನಾಟಕ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿದೆ.