#Exclusive NewsTop Newsರಾಜಕೀಯರಾಜ್ಯಸುದ್ದಿ
ಯತ್ನಾಳ್ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ ಜಿ.ಟಿ.ದೇವೆಗೌಡ..!

ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರ ಇದೆ ಎಂಬ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೆಗೌಡ, ನಿನಗೇನು ಗೊತ್ತು ನನ್ನ ಯೋಗ್ಯತೆ, ಆಸ್ತಿ, ಸಾಲದ ಲೆಕ್ಕ ಎಂದು ಜಿ.ಟಿ. ದೇವೇ ಗೌಡ ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು. ನಿನ್ನ ವಿಚಾರವೂ ನನಗೆ ಗೊತ್ತಿದೆ. ನಾನು ಬಹಿರಂಗಪಡಿಸುತ್ತೇನೆ. ನಾನು ಭ್ರಷ್ಟಾಚಾರ ಮಾಡಿರುವುದನ್ನು ನೀನು ಸಾಬೀತು ಪಡಿಸಿದರೆ ರಾಜೀನಾಮೆ ನೀಡುತ್ತೇನೆ ಎಂದು ಸವಾಲು ಹಾಕಿದರು.
ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಜೊತೆ ಮಾತನಾಡಬೇಡ. ಇದು ನಾನು ನಿನಗೆ ಹಾಕುತ್ತಿರುವ ಸವಾಲು. ನನ್ನ ಬಗ್ಗೆ ಮಾತನಾಡುವಾಗ ಎಚ್ಚರಿಕೆ ಇರಲಿ. ನೀನು ರಾಜಕೀಯಕ್ಕೆ ಬಂದಾಗ ಏನಿತ್ತು ನಂತರ ನೀನು ಹೇಗೆ ದುಂಡಗಾದೆ. ಸೌಹಾರ್ದ ಬ್ಯಾಂಕಿನ ಹೆಸರಿನಲ್ಲಿ ಎಷ್ಟು ಹಣ ಡಿಪಾಸಿಟ್ ಮಾಡಿಸಿಕೊಂಡು ಅದನ್ನು ಎಲ್ಲೆಲ್ಲಿ ಹೂಡಿಕೆ ಮಾಡಿದ್ದೀಯ ಎಂಬುದು ನನಗೆ ಗೊತ್ತಿಲ್ಲವೇ ಎಂದು ಯತ್ನಾಳ ವಿರುದ್ದ ಜಿ.ಟಿ.ದೇವೆಗೌಡ ನಿಗಿನಿಗಿ ಕೆಂಡಕಾರಿದರು.




