Friday, November 21, 2025
20 C
Bengaluru
Google search engine
LIVE
ಮನೆ#Exclusive NewsTop Newsಮುಡಾ ಹಗರಣ: ಕೇಸಲ್ಲಿ ಸಿದ್ದರಾಮಯ್ಯಗೆ ಕ್ಲೀನ್​ಚಿಟ್? ಲೋಕಾಯುಕ್ತದಿಂದ ಬಿಗ್ ರಿಲೀಫ್

ಮುಡಾ ಹಗರಣ: ಕೇಸಲ್ಲಿ ಸಿದ್ದರಾಮಯ್ಯಗೆ ಕ್ಲೀನ್​ಚಿಟ್? ಲೋಕಾಯುಕ್ತದಿಂದ ಬಿಗ್ ರಿಲೀಫ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ ಕ್ಲೀನ್‌ಚಿಟ್‌ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಡಾ ಹಗರಣದ ತನಿಖಾ ವರದಿಯನ್ನು ಲೋಕಾಯುಕ್ತ ಅಧಿಕಾರಿಗಳು ಸೋಮವಾರ ಕೋರ್ಟ್‌ಗೆ ಸಲ್ಲಿಕೆ ಮಾಡಲಿದ್ದಾರೆ. ಲೋಕಾಯುಕ್ತ ಎಸ್​​ಪಿ ಟಿಜೆ ಉದೇಶ್ ನೇತೃತ್ವದಲ್ಲಿ ತನಿಖೆ ನಡೆದು ವರದಿ ಸಿದ್ಧಪಡಿಸಲಾಗಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿ ನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ತಿಳಿದು ಬಂದಿದೆ.

ಕೆಸರೆ ಜಮೀನು ಸರ್ವೇ ನಂ.464 ರ 3.16 ಎಕರೆ ಭೂಮಿ ಪರಿವರ್ತನೆಯ 14 ಸೈಟ್ ಗಳನ್ನ ಪಡೆದುಕೊಂಡ ನಿಯಮಾವಳಿಗಳ ಕುರಿತು ಎಲ್ಲಾ ಹಂತದಲ್ಲೂ ತನಿಖೆ ಮಾಡಲಾಗಿದೆ. ತನಿಖೆಯಲ್ಲಿ ಅಧಿಕಾರಿಗಳ ದೋಷಗಳು ಕಂಡು ಬಂದಿದೆ. ಸಿಎಂ ಹಾಗೂ ಅವರ ಪತ್ನಿಯಾಗಲಿ ಈ ಪ್ರಕರಣದಲ್ಲಿ‌ ಭಾಗಿಯಾಗಿಲ್ಲ ಎಂದು ಹೇಳಲಾಗಿದೆ ಎನ್ನಲಾಗಿದೆ. ಲೋಕಾಯುಕ್ತರು ಅಂತಿಮ ಹಂತದ ರಿಪೋರ್ಟ್ ರೆಡಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಮುಡಾ ಹಗರಣ ಸಂಬಂಧ ಮತ್ತೊಂದೆಡೆ, ಜಾರಿ ನಿರ್ದೇಶನಾಲಯ ತನಿಖೆಯೂ ಪ್ರಗತಿಯಲ್ಲಿದೆ. ಏತನ್ಮಧ್ಯೆ, ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮನವಿ ಮಾಡಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯೂ ಕರ್ನಾಟಕ ಹೈಕೋರ್ಟ್​​ನಲ್ಲಿ ನಡೆಯುತ್ತಿದೆ. ಜನವರಿ 27ರಂದು ಸಿಬಿಐ ತನಿಖೆ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡುವ ನಿರೀಕ್ಷೆ ಇದೆ. ಅದಕ್ಕೂ ಮುನ್ನ ಲೋಕಾಯುಕ್ತ ಅಧಿಕಾರಿಗಳು ತನಿಖಾ ವರದಿಯನ್ನು ಕೋರ್ಟ್​ಗೆ ಸಲ್ಲಿಕೆ ಮಾಡಲಿದ್ದಾರೆ. ಹೀಗಾಗಿ ಪ್ರಕರಣದ ಕುರಿತ ಕುತೂಹಲ ಇದೀಗ ಮತ್ತಷ್ಟು ಹೆಚ್ಚಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments