Top Newsರಾಜಕೀಯರಾಜ್ಯಸುದ್ದಿ

ಪ್ರತ್ಯೇಕ ಸಭೆಗಳ ಬಳಿಕ ದಿಢೀರ್ ದೆಹಲಿ ಪ್ರವಾಸ ಮಾಡಿದ ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಗದ್ದಲದ ಹಿನ್ನೆಲೆಯಲ್ಲಿ ಬಿವೈ ವಿಜಯೇಂದ್ರ ಅವರು ದಿಢೀರ್ ಆಗಿ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ.

ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯಬಾರದು ಎಂಬ ನಿಟ್ಟಿನಲ್ಲಿ ಯತ್ನಾಳ್ ನೇತೃತ್ವದ ರೆಬೆಲ್ ಬಣ ಪಟ್ಟು ಹಿಡಿದಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮುಂದುವರಿಸುವುದಾದರೆ ಚುನಾವಣೆಯಲ್ಲಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳುತ್ತೇವೆ ಎಂಬ ಎಚ್ಚರಿಕೆ ನೀಡಿದೆ. ಇದು ಹೈಕಮಾಂಡ್‌ ತಲೆನೋವಿಗೆ ಕಾರಣವಾಗಿದೆ.

ಈ ನಡುವೆ ಬಿವೈ ವಿಜಯೇಂದ್ರ ಪರವಾಗಿ ಮಾಜಿ ಶಾಸಕರ ತಂಡ ನಿರಂತರ ಬ್ಯಾಟಿಂಗ್ ಮಾಡುತ್ತಿದೆ. ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ನೇತೃತ್ವದಲ್ಲಿ ವಿಜಯೇಂದ್ರ ಪರವಾಗಿ ನಿರಂತರ ಸಭೆಗಳನ್ನು ನಡೆಸಲಾಗುತ್ತಿದೆ. ಅಲ್ಲದೆ, ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರವಾಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ.

ವರಿಷ್ಠರನ್ನು ಭೇಟಿ ಮಾಡಿ ಮನವರಿಕೆ?

ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿವೈ ವಿಜಯೇಂದ್ರ ಅವರು ದಿಢೀರ್ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಒಂದು ಕಡೆಗೆ ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ ಎಂಬ ವಿಪಕ್ಷಗಳ ಟೀಕೆಗಳು ಇದ್ದಾಗಲೇ ಗಾಲಿ ಜನಾರ್ದರ ರೆಡ್ಡಿ ಹಾಗೂ ಶ್ರೀರಾಮುಲು ನಡುವಿನ ಭಿನ್ನಾಭಿಪ್ರಾಯ ಬಹಿರಂಗವಾಗಿ ಸ್ಫೋಟವಾಗಿದೆ.

Comments (0)

Your email address will not be published. Required fields are marked *

Back to top button