#Exclusive NewsTop Newsಜಿಲ್ಲೆಸುದ್ದಿ
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ ; 25 ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತದಲ್ಲಿ 25 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಯಮಕನಮರಡಿ ಗ್ರಾಮದಿಂದ ಹಿಡಕಲ್ ಡ್ಯಾಮ್ಗೆ ನರೇಗಾ ಕೆಲಸಕ್ಕೆ ಹೊರಟಿದ್ದ ಕಾರ್ಮಿಕರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.ಕಾರ್ಮಿಕರನ್ನು ತುಂಬಿಕೊಂಡು ಕೆಲಸಕ್ಕೆ ಕರೆದೊಯ್ಯುತ್ತಿದ್ದ ಗೂಡ್ಸ್ ವಾಹನ, ಅಡ್ಡ ಬರುತ್ತಿದ್ದ ಬೈಕ್ ಗೆ ಆಗುವ ಅಪಘಾತವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.
ಈ ವೇಳೆ ಗಾಡಿಯಲ್ಲಿ ಸುಮಾರು 30 ಕಾರ್ಮಿಕರಿದ್ದು. ಇವರಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ, ಗಾಯಾಳುಗಳನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.




