ಗದಗ : ಹೋರಾಟಗಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನವರ ಪುಣ್ಯಸ್ಮರಣೆ ಅಂಗವಾಗಿ ಜನವರಿ 26 ರಂದು ಸಾಯಂಕಾಲ 6:30ಕ್ಕೆ ಪಂಜಿನ ಮೇರವಣಿಗೆಯನ್ನು ಗದಗ ಜಿಲ್ಲೆಯ ಕಿತ್ತೂರ ಚೆನ್ನಮ್ಮ ಸರ್ಕಲ್ ನಿಂದ ಅರಂಭವಾಗುತ್ತದೆ.
ನಂತರ ಬಸವೇಶ್ವರ ಸರ್ಕಲ್ ನಲ್ಲಿರುವ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ನಡೆಯಲಿದೆ.ಹುಯಿಲಗೋಳ ನಾರಾಯಣರಾವ್ ಸರ್ಕಲ್, ಮಹೇಂದ್ರಕರ್ ಸರ್ಕಲ್, ಶ್ರೀ ತೋಂಟದಾರ್ಯ ಆಟೋ ಸ್ಟ್ಯಾಂಡ್, ಗಾಂಧಿ ಸರ್ಕಲ್ ಮಾರ್ಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಸಂಪನ್ನವಾಗಲಿದ್ದು, ಎಲ್ಲ ದೇಶಭಕ್ತರು ಈ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೋಳಿಸಬೇಕು.ಜಿಲ್ಲಾ ಕ್ರಾಂತಿಸೇನಾ ಸಂಘಟನೆ ಹಾಗೂ ಸಂಗೋಳ್ಳಿ ರಾಯಣ್ಣನ ಅಭಿಮಾನಿಗಳಿಂದ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.