Thursday, November 20, 2025
24.6 C
Bengaluru
Google search engine
LIVE
ಮನೆ#Exclusive NewsTop Newsನಕಲಿ ಫೈನಾನ್ಸ್ ರಿಕವರಿ ವಸೂಲಿ ದಂಧೆ – ನಾಲ್ವರು ಆರೋಪಿಗಳ ಬಂಧನ

ನಕಲಿ ಫೈನಾನ್ಸ್ ರಿಕವರಿ ವಸೂಲಿ ದಂಧೆ – ನಾಲ್ವರು ಆರೋಪಿಗಳ ಬಂಧನ

ರಾಯಚೂರು: ರಾಜಧಾನಿಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗುವುದು ಒಂದೆಡೆಯಾದರೆ, ಮತ್ತೊಂದು ಕಡೆ ನಕಲಿ ಸಾಲ ರಿಕವರಿ ಟೀಂ ವಸೂಲಿ ದಂಧೆ ನಡೆಸಿರುವುದು ಬೆಳಕಿಗೆ ಬಂದಿದೆ. ಫೈನಾನ್ಸ್ ಸಾಲ ರಿಕವರಿ ಟೀಂ ಹೆಸರಲ್ಲಿ ಕಿರುಕುಳ ನೀಡುತ್ತಿದ್ದ ನಾಲ್ವರು ಆರೋಪಿಗಳನ್ನ ರಾಯಚೂರು ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಫಯಾಜ್, ಶೇಖ್ ಎಂಡಿ ಆಯುಬ್, ಸೈಯದ್ ಶಹಬಾಜ್ ಅಹ್ಮದ್, ಅರೋನ್ ರಸೀದ್ ಎಂದು ಗುರುತಿಸಲಾಗಿದೆ. ಈ ತಂಡ ಮೊಬೈಲ್ ಆ್ಯಪ್‌ನಲ್ಲಿ ಫೈನಾನ್ಸ್‌ಗಳ ಸಾಲ ಬಾಕಿ ಇರುವವರನ್ನ ಗುರುತಿಸಿ, ಟಾರ್ಗೆಟ್ ಮಾಡುತ್ತಿದ್ದರು. ರಸ್ತೆ ಮಧ್ಯದಲ್ಲೇ ಬೈಕ್, ವಾಹನಗಳನ್ನ ಅಡ್ಡಗಟ್ಟಿ ಸಾಲ ತೀರಿಸುವಂತೆ ಬೆದರಿಕೆ ಹಾಕಿ ಕಿರುಕುಳ ನೀಡುತ್ತಿದ್ದರು.

ಅಲ್ಲದೇ ಯಾದಗಿರಿ ಜಿಲ್ಲೆ ಗುಂಡ್ಲೂರಿನ ಸೈಯದ್ ಬಾಷಾ ಎಂಬುವವರ ಬುಲೇರೋ ವಾಹನವನ್ನ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಹಿಡಿದು 12 ಸಾವಿರ ರೂ. ಬೇಡಿಕೆ ಇಟ್ಟು ವಾಹನ ಜಪ್ತಿ ಮಾಡಿದ್ದರು. ಸಾಲ ಮಾಡಿದ್ದ ಫೈನಾನ್ಸ್ ಕಂಪನಿಯಲ್ಲಿ ಸೈಯದ್ ಬಾಷಾ ಕಂತು ಕಟ್ಟಿ ಬಂದಿದ್ದರೂ ವಾಹನ ಬಿಟ್ಟಿರಲಿಲ್ಲ. ಫೈನಾನ್ಸ್ನಲ್ಲಿ ಕಟ್ಟಿದರೆ ಸಾಲಲ್ಲ, ನಮಗೂ ಹಣ ಕೊಡಬೇಕು ಎಂದು ಒತ್ತಾಯಿಸಿದ್ದರು. ಇದರಿಂದ ಅನುಮಾನದ ಮೇಲೆ ಸೈಯದ್ ಬಾಷಾ ಸಹೋದರ ಅಜೀಜ್ ರಾಯಚೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸುಮಾರು ವರ್ಷಗಳಿಂದ ಈ ನಕಲಿ ದಂಧೆಯಲ್ಲಿ ತೊಡಗಿರುವುದು ವಿಚಾರಣೆಯಲ್ಲಿ ಹೊರಬಂದಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments