#Exclusive NewsTop Newsಜಿಲ್ಲೆರಾಜಕೀಯರಾಜ್ಯಸುದ್ದಿ

ಶ್ರೀರಾಮುಲು ಪಕ್ಷದ ಸಿದ್ದಾಂತ ಒಪ್ಪಿ ಬಂದರೆ ಸ್ವಾಗತ ; ಸಚಿವ ಸತೀಶ್ ಜಾರಕಿಹೊಳಿ

ಶ್ರೀರಾಮುಲು ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ ಬಳಿಕ ಮಾತನಾಡಿದ ಅವರು, ಶ್ರೀರಾಮುಲು ಪಕ್ಷಕ್ಕೆ ಬರಲು ನನ್ನ ವಿರೋಧವಿಲ್ಲ.

ಶ್ರೀರಾಮುಲು ಪಕ್ಷಕ್ಕೆ ಬರುತ್ತಾರೆ ಎನ್ನುವುದು ವದಂತಿ ಅಷ್ಟೇ. ವಿರೋಧದ ಬಗ್ಗೆ ಮಾತನಾಡಿದರೆ ಹೈಕಮಾಂಡ್ ನೋಟಿಸ್ ನೀಡುತ್ತದೆ. ಆಗ ನಾನು ಉತ್ತರ ನೀಡಬೇಕಾಗುತ್ತದೆ ಎಂದರು.ಶ್ರೀರಾಮುಲು ಅವರನ್ನು ಕಾಂಗ್ರೆಸ್‌ಗೆ ಕರೆತರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಡಿಕೆಶಿ ಶ್ರೀರಾಮುಲು ಅವರನ್ನು ಸಂಪರ್ಕ ಮಾಡಿದ್ದು ನನಗೆ ಗೊತ್ತಿಲ್ಲ. ಇನ್ನೂ ನಾನು ಸಿಎಂ ಆಗುತ್ತೇನೆ ಎಂದು ಹೇಳಿಲ್ಲ. ನಾನು ಸಿಎಂ ಅಭ್ಯರ್ಥಿ ಎಂದು ಹೇಳಿದ್ದೇನೆ. ಸಿಎಂ ಮಾಡುವುದು ಬಿಡುವುದು ಹೈಕಮಾಂಡ್ ಜವಾಬ್ದಾರಿ.

 

 

Comments (0)

Your email address will not be published. Required fields are marked *

Back to top button