#Exclusive NewsTop Newsಜಿಲ್ಲೆರಾಜಕೀಯರಾಜ್ಯಸುದ್ದಿ

13 ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್​..!

ಬೆಳಗಾವಿ : ಅಪಘಾತದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡಗಡೆಯಾಗಿದ್ದಾರೆ. ಇನ್ನು ಸತತ 13 ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರಿಗೆ ಹಾಗೂ ಸಿಬ್ಬಂದಿಗೆ ಭಾವನಾತ್ಮಕ ಪತ್ರ ಬರೆದು ಕೃತಜ್ಞತೆ ಸಲ್ಲಿಸಿದ್ದಾರೆ.ಜನವರಿ 14ರಂದು ಬೆಂಗಳೂರಿನಿಂದ ಬೆಳಗಾವಿಗೆ ತೆರಳುವಾಗ ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತವಾಗಿ, ಕತ್ತಿಗೆ ಗಾಯವಾಗಿತ್ತು. 13 ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಹಿರಿಯರ ಆಶೀರ್ವಾದ, ತಂದೆ ತಾಯಿ ಆಶೀರ್ವಾದ, ಮುಖ್ಯಮಂತ್ರಿ, ಸಚಿವರು, ಶಾಸಕರು, ಡಿಸಿಎಂ ಮತ್ತು ಸುರ್ಜೇವಾಲ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು. ಕ್ಷೇತ್ರದ ಎಲ್ಲ ಮತದಾರರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು. ವಿಡಿಯೋ ಕಾನ್ಪರೆನ್ಸ್ ಮೂಲಕ ಕೆಲಸ ಮಾಡ್ತಿದ್ದೇನೆ. ವೈದ್ಯರು ಇನ್ನೂ ಮೂರು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಹೇಳಿದ್ದಾರೆ ಎಂದು ತಿಳಿಸಿದರು.

 

Comments (0)

Your email address will not be published. Required fields are marked *

Back to top button