#Exclusive NewsTop Newsಮನರಂಜನೆಸಿನಿಮಾಸುದ್ದಿ

ನಟ ಶಿವರಾಜ್ ಕುಮಾರ್ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜನವರಿ 27: ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಇಂದು ನಟ ಶಿವರಾಜ್ ಕುಮಾರ್  ಅವರ ನಾಗವಾರದಲ್ಲಿನ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ  ವಿಚಾರಿಸಿದರು.

ಶಿವರಾಜ್ ಕುಮಾರ್ ಅವರ ಶಸ್ತ್ರಚಿಕಿತ್ಸೆಯ ನಂತರ ಹಿಂತಿರುಗಿ  ಬಂದ ನಂತರ ಅವರ ಆರೋಗ್ಯವನ್ನು ವಿಚಾರಿಸಲು ಇಂದು ಭೇಟಿ ಮಾಡಿದ್ದೇನೆ. ಅವರ ಶಸ್ತ್ರ ಚಿಕಿತ್ಸೆಯ ಮರುದಿನವೇ ಅವರಿಗೆ ಕರೆಮಾಡಿ ಆರೋಗ್ಯ ವಿಚಾರಿಸಿದಾಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ತೊಂದರೆ ಇಲ್ಲ ಎಂದು ತಿಳಿಸಿದ್ದರು.ಮುಂದಿನ ತಿಂಗಳಿನಿಂದ ಚಿತ್ರೀಕರಣಕ್ಕೆ ತೆರಳುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

ಮೂತ್ರಕೋಶದ ಕ್ಯಾನ್ಸರ್ ಸಂಬಂಧ ಆಪರೇಷನ್ ಮಾಡಿಸಿಕೊಳ್ಳಲು ನಟ ಶಿವರಾಜಕುಮಾರ್ ಡಿ.18 ರಂದು ಅಮೆರಿಕಕ್ಕೆ ತೆರಳಿದ್ದರು. ಬಳಿಕ ಡಿ.24 ರಂದು ಆಪರೇಷನ್‌ಗೆ ಒಳಗಾಗಿದ್ದು, ಇದೀಗ ಸಂಪೂರ್ಣ ಗುಣಮುಖರಾಗಿ ಭಾನುವಾರ ಬೆಂಗಳೂರಿಗೆ ಮರಳಿದ್ದರು.

 

 

 

Comments (0)

Your email address will not be published. Required fields are marked *

Back to top button