Top Newsದೇಶ/ವಿದೇಶಸುದ್ದಿ

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಮೃತರ ಕುಟುಂಬಗಳಿಗೆ ಮೋದಿ ಸಂತಾಪ

ನವದೆಹಲಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರಧಾನಿ ಮೋದಿ ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ತಮ್ಮ ಪೋಸ್ಟ್‌ನಲ್ಲಿ, ‘ಪ್ರಯಾಗ್ರಾಜ್ ಮಹಾಕುಂಭದಲ್ಲಿ ಸಂಭವಿಸಿದ ಅಪಘಾತವು ಅತ್ಯಂತ ದುಃಖಕರವಾಗಿದೆ ಎಂದಿದ್ದಾರೆ.

ಘಟನೆಯಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡ ಭಕ್ತರಿಗೆ ನನ್ನ ತೀವ್ರ ಸಂತಾಪಗಳು. ಎಲ್ಲಾ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಲ್ಲಿ ತೊಡಗಿದೆ. ಈ ನಿಟ್ಟಿನಲ್ಲಿ ನಾನು ಮುಖ್ಯಮಂತ್ರಿ ಯೋಗಿ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ನಾನು ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ’ ಎಂದಿ ಮೋದಿ ತಮ್ಮ ಎಕ್ಸ್ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.

Comments (0)

Your email address will not be published. Required fields are marked *

Back to top button