Top Newsರಾಜ್ಯಸುದ್ದಿ

ಮೆಟ್ರೋ ಪ್ರಯಾಣ ದರ ಏರಿಕೆಯನ್ನು ತಡೆಹಿಡಿದ ಕೇಂದ್ರ ಸರ್ಕಾರ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು. ಅಷ್ಟೇ ಅಲ್ಲದೇ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರ ಬೆಂಗಳೂರು ಮೆಟ್ರೋ ರೈಲ್‌ ಕಾರ್ಪೋರೇಷನ್‌ಗೆ ನಿರ್ದೇಶನ ನೀಡಿದೆ. ಈಗ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪಿಸಿ ಮೋಹನ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ದರ ಏರಿಕೆಯನ್ನು ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸಂಸದ ಪಿ.ಸಿ ಮೋಹನ್ ಸೇರಿದಂತೆ ಹಲವು ನಾಯಕರು ನಮ್ಮ ಮೆಟ್ರೋ ದರ ಏರಿಕೆಯನ್ನು ವಿರೊಧಿಸಿದ್ದರು. ಬಾಕಿ ಉಳಿದಿರುವ ಕಾಮಗಾರಿ ಪೂರ್ಣಗೊಳಿಸಿ, ಗೋಷಣೆ ಮಾಡಿರುವ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭ ಮಾಡಿ, ಪ್ರಯಾಣ ದರ ರಹಿತವಾದ ಆದಾಯ ಸಂಗ್ರಹಣೆಗೆ ಗಮನ ಕೊಡಿ ಎಂದು ಸಲಹೆ ನೀಡಿದ್ದರು.

ಪೋಸ್ಟ್‌ನಲ್ಲಿ ಏನಿದೆ?
ಫೆಬ್ರವರಿ 1 ರಂದು ನಿಗದಿಯಾಗಿದ್ದ ಬಿಎಂಆರ್‌ಸಿಎಲ್‌ನ 45% ಮೆಟ್ರೋ ದರ ಹೆಚ್ಚಳದ ಪ್ರಸ್ತಾವನೆಯನ್ನು ತಡೆಹಿಡಿಯಲಾಗಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಮಗ್ರ ವರದಿಯನ್ನು ಸಲ್ಲಿಸುವಂತೆ ಮೋದಿ ಸರ್ಕಾರ ಬಿಎಂಆರ್‌ಸಿಎಲ್‌ಗೆ ನಿರ್ದೇಶನ ನೀಡಿದೆ.

Comments (0)

Your email address will not be published. Required fields are marked *

Back to top button