Top Newsರಾಜ್ಯಸುದ್ದಿ

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಬೆಳಗಾವಿಯ ತಾಯಿ, ಮಗಳು ನಾಲ್ವರ ದುರ್ಮರಣ

ಬೆಳಗಾವಿ: ಪ್ರಯಾಗ್​​​​​ರಾಜ್ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ.

ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ(50) ಹಾಗೂ ಪುತ್ರಿ ಮೇಘಾ ಹತ್ತರವಾಠ(18) ಸಾವನ್ನಪ್ಪಿದ್ದಾರೆ ಎಂದು ಮೃತರು ಸಂಬಂಧಿ ಗುರುರಾಜ ಹುದ್ದಾರ ಅವರು ಮಾಹಿತಿ ನೀಡಿದ್ದಾರೆ. ಕುಂಬಮೇಳದಲ್ಲಿ ಕಾಲ್ತುಳಿತದ ಬಳಿಕ ನಾಲ್ವರನ್ನು ಪ್ರಯಾಗ್‍ರಾಜ್‍ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

ಬೆಳಗಾವಿಯಲ್ಲಿರುವ ಕುಟುಂಬಸ್ಥರಿಗೆ ಇಂದು (ಬುಧವಾರ) ಬೆಳಗ್ಗೆಯಿಂದ ಇಬ್ಬರು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಫೋನ್‌ ರಿಂಗ್ ಆಗುತ್ತಿದ್ದರೂ, ರಿಸೀವ್ ಮಾಡದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಆತಂಕದಲ್ಲಿದ್ದರು.

ಮೂರು ದಿನಗಳ ಹಿಂದೆ ಸಾಯಿರಥ ಟ್ರಾವೆಲ್ ಏಜೆನ್ಸಿ ಮೂಲಕ 13 ಜನರ ತಂಡದಲ್ಲಿ ಅವರು ತೆರಳಿದ್ದರು ಎಂದು ತಿಳಿದು ಬಂದಿದೆ. ಕಾಲ್ತುಳಿತದಲ್ಲಿ ಸರೋಜಿನಿ ನಡುವಿನಹಳ್ಳಿ, ಕಾಂಚನ್ ಕೋಪಾರ್ಡೆ ಸೇರಿದಂತೆ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Comments (0)

Your email address will not be published. Required fields are marked *

Back to top button