Top Newsರಾಜಕೀಯರಾಜ್ಯಸುದ್ದಿ

ಬಿಟ್‌ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ನಲಪಾಡ್‌ಗೆ ಎಸ್‌ಐಟಿ ನೋಟಿಸ್

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಮುಖಂಡನಿಗೆ ಎಸ್​ಐಟಿ ಅಧಿಕಾರಿಗಳು ಶಾಕ್ ಕ ಕೊಟ್ಟಿದ್ದಾರೆ. ಇಂದು ಪ್ರಕರಣದಲ್ಲಿ ಅವರನ್ನು ಆರೋಪಿ ಎಂದು ಮಾಡಿದ್ದು, ಇದಕ್ಕೆ ಸಂಬಂಧಸಿದಂತೆ ನೋಟಿಸ್ ನೀಡಲಾಗಿದೆ. ಈ ಹಿಂದೆ ಬಿಟ್​ಕಾಯಿನ್ ಕೇಸ್‌ನ ಪ್ರಮುಖ ಆರೋಪಿಯಾದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಗೆ ನಲಪಾಡ್ ಆಪ್ತನಾಗಿದ್ದ ಎನ್ನುವ ಕಾರಣಕ್ಕೆ ಬೆಂಗಳೂರಿನ ಕಾಟನ್​ಪೇಟೆ ಹ್ಯಾಕಿಂಗ್ ಕೇಸ್​ನಲ್ಲಿ ಶ್ರೀಕಿ ಜೊತೆ ವ್ಯವಹಾರಿಕ ಸಂಬಂಧದ ಅನುಮಾನದಲ್ಲಿ ವಿಚಾರಣೆ ನಡೆಸಲಾಗಿತ್ತು ಆದ್ರೆ ಇದೀಗ ನಲಪಾಡ್ ಆರೋಪಿ ತಿಳಿಸಿಲಾಗಿದೆ.

ಬಿಟ್‌ಕಾಯಿನ್ ಪ್ರಕರಣದಲ್ಲಿ ನಲಪಾಡ್ ಇದೀಗ ಆರೋಪಿಯಾಗಿದ್ದು, ಪ್ರಕರಣ ಸಂಬಂಧ ಫೆ. 7 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. ಈ ಹಿಂದೆ ಸಿಐಡಿ ಕಚೇರಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರನ್ನು ವಿಚಾರಣೆ ಮಾಡಲಾಗಿತ್ತು. ಹೇಳಿಕೆ ದಾಖಲು ಮಾಡಿಕೊಂಡ ಬಳಿಕ ಪ್ರಕರಣದಲ್ಲಿ ನಲಪಾಡ್ ಅವರನ್ನೂ ಆರೋಪಿಯನ್ನಾಗಿ ಮಾಡಲಾಗಿದೆ.

Comments (0)

Your email address will not be published. Required fields are marked *

Back to top button