ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ, 2028 ಕ್ಕೆ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸಿ ಭಾರತೀಯ ಜನತಾ ಪಕ್ಷದ ನಾಯಕರನ್ನ ಸಿಎಂ ಮಾಡುವೇ ಎಂದು ಕೋಲಾರದಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಪರೋಕ್ಷವಾಗಿ ರಾಜ್ಯಾಧ್ಯಕ್ಷನಾಗುವ ತೋಡಿಕೊಂಡಿದ್ದಾರೆ.
ಯಡಿಯೂರಪ್ಪ ಅವರಿಂದ ಬೆಳೆದಿದ್ದೇವೆ. ಅವರು ಮನಸ್ಸು ಮಾಡಿ ನನಗೆ ಅವಕಾಶಕೊಟ್ಟರೆ ರಾಜ್ಯದ 224 ಕ್ಷೇತ್ರದಲ್ಲಿ ಸಂಘಟನೆ ಮಾಡಿ ಭಿನ್ನಾಭಿಪ್ರಾಯ ಶಮನ ಮಾಡುವೆ. ಹಾಗೂ ಎಲ್ಲಾ ನಾಯಕರನ್ನು ಪರಿಗಣನೆಗೆ ತೆಗೆದುಕೊಳ್ಳುವೆ.
ದಕ್ಷಿಣ ಭಾರತದ ಭೀಷ್ಮರಾಗಿರುವ ಯಡಿಯೂರಪ್ಪನವರ ಮುಂದಾಳತ್ವ ತೆಗೆದುಕೊಳ್ಳಬೇಕಾಗಿದೆ. ವಿಜಯೇಂದ್ರ ಅವರು ಹೊಸದಾಗಿ ಅಧ್ಯಕ್ಷರಾಗಿದ್ದು, ಅನುಭವದ ಕೊರತೆಯಾಗಿದೆ. ಈ ಹಿನ್ನೆಲೆ ಯಡಿಯೂರಪ್ಪ ಮುಂದೆ ಬರಬೇಕು ಎಂದರು.