Top Newsಸುದ್ದಿ

ಕಾಡಾನೆ ದಾಳಿಯಿಂದ ಬೈಕ್​​​ನಲ್ಲಿ ತೆರಳುತ್ತಿದ್ದ ಜರ್ಮನ್ ಪ್ರವಾಸಿಗ ಸಾವು

ಚೆನೈ: ಕೊಯಮತ್ತೂರಿನ ವಾಲ್ಪಾರೈ ಬಳಿಯ ಘಾಟಿ ರಸ್ತೆಯಲ್ಲಿ ಬೈಕ್​​​ನಲ್ಲಿ ತೆರಳುತ್ತಿದ್ದ ಜರ್ಮನ್ ಪ್ರವಾಸಿಗನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೈಕ್​ನಲ್ಲಿ ತೆರಳುತ್ತಿದ್ದ ಜರ್ಮನ್ ಪ್ರವಾಸಿಗ ಆನೆಯನ್ನು ಕಂಡು ರಸ್ತೆಯಿಂದ ಹೋಗಲು ಪ್ರಯತ್ನಿಸಿದ್ದ. ಆನೆ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಮೈಕೆಲ್ ಶುಲ್ಜ್ (77) ಎಂದು ಗುರುತಿಸಲಾಗಿದೆ. ಟೈಗರ್ ವ್ಯಾಲಿ ರಸ್ತೆಯಲ್ಲಿ ಬೈಕ್‍ನಲ್ಲಿ ತೆರಳುವಾಗ ಆನೆ ಇರುವುದನ್ನು ಗಮನಿಸಿಯೂ ಅವರು ಸಮೀಪ ಹೋಗಿದ್ದಾರೆ. ಈ ವೇಳೆ ಬೈಕ್ ಸಮೇತ ಅವರನ್ನು ಆನೆ ಎತ್ತಿ ಎಸೆದಿದೆ. ಅವರು ತೀವ್ರ ಗಾಯಗೊಂಡಿದ್ದರು. ಅವರನ್ನು ಪೊಲ್ಲಾಚಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಅವರು ಸಾವಿಗೀಡಾಗಿದ್ದಾರೆ.

ಆನೆ ಪ್ರವಾಸಿಗನ ಮೇಲೆ ದಾಳಿ ನಡೆಸಿರುವುದನ್ನು ಹಿಂದೆ ಬರುತ್ತಿದ್ದ ವಾಹನ ಸವಾರರು ವಿಡಿಯೋ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.

Comments (0)

Your email address will not be published. Required fields are marked *

Back to top button