Top Newsರಾಜ್ಯಸುದ್ದಿ

ನ್ಯಾಕ್ ಲಂಚ ಪ್ರಕರಣ: ದಾವಣಗೆರೆ ವಿವಿ ಪ್ರೊ.ಗಾಯಿತ್ರಿ ಸಸ್ಪೆಂಡ್

ದಾವಣಗೆರೆ: ನ್ಯಾಕ್ ಪರಿಶೀಲನಾ ಸಮಿತಿಯ ಲಂಚ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿರುವ ದಾವಣಗೆರೆ ವಿಶ್ವವಿದ್ಯಾಲಯದ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಗಾಯಿತ್ರಿ ದೇವರಾಜು ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.

ಗುರುವಾರ ನಡೆದ ದಾವಣಗೆರೆ ವಿಶ್ವವಿದ್ಯಾಲರ ವಿಶೇಷ ಸಿಂಡಿಕೇಟ್ ಸಭೆಯಲ್ಲಿ ಈ ಕುರಿತ್ತು ಚರ್ಚಿಸಿ, ಗಾಯಿತ್ರಿ ಅವರನ್ನು 6 ತಿಂಗಳು ಅವಧಿಗೆ ಅಮಾನತು ಮಾಡಿ ನಿರ್ಣಯ ಕೈಗೊಳ್ಳಲಾಗಿದೆ.

ಕೆಸಿಎಸ್​​ಆರ್ ನಿಯಮಗಳ ಪ್ರಕಾರ ಪ್ರೊ.ಗಾಯಿತ್ರಿ ದೇವರಾಜು ಅವರನ್ನು ಅಮಾನತುಗೊಳಿಸಲಾಗಿದೆ. ಆದೇಶದ ಪ್ರತಿಯನ್ನು ರಾಜ್ಯಪಾಲರು ಹಾಗೂ ಸರ್ಕಾರಕ್ಕೆ ಕಳಿಸಕೊಡಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಡಿ ಕುಂಬಾರ ತಿಳಿಸಿದರು.

ನ್ಯಾಕ್ ತಪಾಸಣಾ ಸಮಿತಿಯ ಸದಸ್ಯರೂ ಆಗಿರುವ ಗಾಯಿತ್ರಿ ಅವರನ್ನು ಲಮಚ ಪಡೆದ ಆರೋಪದಲ್ಲಿ ಸಿಬಿಐ ಅಧಿಕಾರಿಗಳು ಈಚೆಗೆ ವಿಚಾರಣೆಗೆ ಒಳಪಡಿಸಿ ಬಂಧಿಸಿದ್ದರು. ವಿಶ್ವವಿದ್ಯಾಲಯದ ಕುಲಸಚಿವೆಯಾಗಿಯೂ ಕಾರ್ಯ ನಿರ್ವಹಿಸಿದ್ದ ಅವರ ನಿವಾಸಕ್ಕೂ ಭೇಟಿ ನೀಡಿ ಪರಿಶೀಲಿಸಿದ್ದರೂ

Comments (0)

Your email address will not be published. Required fields are marked *

Back to top button