Friday, January 30, 2026
17.8 C
Bengaluru
Google search engine
LIVE
ಮನೆ#Exclusive Newsಮೆಟ್ರೋ ದರ ಇಳಿಕೆಗೆ ಸಿಎಂ ಸೂಚನೆ..!

ಮೆಟ್ರೋ ದರ ಇಳಿಕೆಗೆ ಸಿಎಂ ಸೂಚನೆ..!

ಮೆಟ್ರೋ ಪ್ರಯಾಣ ದರ ಹೆಚ್ಚಳದಲ್ಲಿ ಕೆಲವು ಸ್ಟೇಜ್‌ಗೆ ದುಪ್ಪಟ್ಟು ದರ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರ ಹಿತ ದೃಷ್ಟಿಯಿಂದ ಅದನ್ನು ಕಡಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮೆಟ್ರೋ ಟಿಕೆಟ್ ದರ ಇಳಿಕೆ ಮಾಡುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಸಿಎಂ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಿಎಂ ಟ್ವಿಟ್ ನಲ್ಲಿ ಏನಿದೆ?

ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ. ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಟ್ಟಿಟ್ ಮಾಡಿದ್ಧಾರೆ.

 

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments