ಪುಲ್ವಾಮಾ ದಾಳಿಗೆ ಆರು ವರ್ಷ; ಗಣ್ಯರಿಂದ ಹುತಾತ್ಮ ಯೋಧರಿಗೆ ಗೌರವ ನಮನ

ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಾರತೀಯ ಯೋಧರ ಮೇಲೆ ಉಗ್ರರು ನಡೆಸಿದ್ದ ಅಮಾನುಷ ದಾಳಿಗೆ ಇಂದಿಗೆ(ಫೆ.14) ಆರು ವರ್ಷವಾಗಿದೆ. ಪುಲ್ವಾಮಾ ದಾಳಿಯಲ್ಲಿ 40 CRPF ಯೋಧರು ಹುತಾತ್ಮರಾಗಿದ್ದರು.
ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, 2019ರಲ್ಲಿ ನಡೆದ ಭೀಕರ ದಾಳಿಯಲ್ಲಿ ವೀರಯೋಧರನ್ನು ನಾವು ಕಳೆದುಕೊಂಡಿದ್ದೇವೆ. ಮುಂಬರುವ ಪೀಳಿಗೆ ಯೋಧರ ಬಲಿದಾನವನ್ನು ಎಂದಿಗೂ ಮರೆಯುವುದಿಲ್ಲ ಎಂದು ಪ್ರಧಾನಿ ತಿಳಿಸಿದ್ದಾರೆ.
https://x.com/narendramodi/status/1890237167521395069
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರಯೋಧರಿಗೆ ಗೌರವ ಸಲ್ಲಿಸುತ್ತೇನೆ. ಅವರ ಬಲಿದಾನವನ್ನು ಭಾರತ ಎಂದಿಗೂ ಮರೆಯುವುದಿಲ್ಲ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.
https://x.com/RahulGandhi/status/1890278245217820701
2019ರ ಈ ದಿನದಂದು ಪುಲ್ವಾಮಾದಲ್ಲಿ ನಡೆದ ಭೀಕರ ಉಗ್ರ ದಾಳಿಗೆ ಭಾರತದ ಧೈರ್ಯಶಾಲಿ CRPF ಜವಾನರನ್ನು ಕಳೆದುಕೊಂಡಿದೆ. ಅವರ ಬಲಿದಾನವನ್ನು ದೇಶ ಎಂದಿಗೂ ಮರೆಯುವುದಿಲ್ಲ. ಹುತಾತ್ಮ ಯೋಧರಿಗೆ ನನ್ನ ನಮನಗಳು. ಭಾರತ ಒಗ್ಗಟ್ಟಿನಿಂದ ಭಯೋತ್ಪಾದನೆ ವಿರುದ್ದ ಹೋರಾಡುತ್ತೇವೆ ಎಂದು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಎಕ್ಸ್ ಖಾಯೆಯಲ್ಲಿ ಬರೆದುಕೊಂಡಿದ್ದಾರೆ.
https://x.com/rajnathsingh/status/1890235536020746261
ಪುಲ್ವಾಮ ದಾಳಿ ಭಾರತದ ಇತಿಹಾಸದಲ್ಲಿ ಅತ್ಯಂತ ಕರಾಳ ದಿನ. ರಾಷ್ಟ್ರ ರಕ್ಷಣೆಯ ಮಹತ್ ಕಾರ್ಯದಲ್ಲಿ ಹುತಾತ್ಮರಾದ ಎಲ್ಲಾ ವೀರಯೋಧರ ತ್ಯಾಗ – ಬಲಿದಾನವನ್ನು ಸ್ಮರಿಸುತ್ತಾ, ನನ್ನ ಗೌರವ ನಮನ ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ ಮಾಡಿದ್ದಾರೆ.
https://x.com/CMofKarnataka/status/1890275991463031127
ದೇಶ ರಕ್ಷಣೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ ನಮ್ಮೆಲ್ಲ ಯೋಧರಿಗೆ ಗೌರವಪೂರ್ವಕ ನಮನಗಳು. ನಮ್ಮ ವೀರ ಯೋಧರ ತ್ಯಾಗ ಹಾಗೂ ಬಲಿದಾನಗಳನ್ನು ಸ್ಮರಿಸೋಣ ವಿಪಕ್ಷ ನಾಯಕ ಆರ್. ಅಶೋಕ ತಿಳಿಸಿದ್ದಾರೆ.



