ರಾಜ್ಯದ 9 ವಿಶ್ವವಿದ್ಯಾಲಯಗಳಿಗೆ ಬೀಗ?

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ಅನ್ನು ಮುಚ್ಚಲು ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದೆ.
ಬೀದರ್ ವಿಶ್ವವಿದ್ಯಾಲಯ ಹೊತುಪಡಿಸಿ, ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯವೂ ಸೇರಿದಂತೆ ಎಲ್ಲಾ ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬೇರೆ ವಿಶ್ವವಿದ್ಯಾಲಯಗಳಿಗೆ ಹೋಲಿಸಿದರೆ, ಬೀದರ್ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಯಾವುದೇ ವಿಶ್ವವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯ. ಆದ್ದರಿಂದ ಈ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ವರದಿಗಳು ವಿವರಿಸಿವೆ.
ವಿಶ್ವವಿದ್ಯಾಲಯಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ ದೊಡ್ಡ ಮೊತ್ತದ ಅಗತ್ಯವಿದೆ. 100 ರಿಂದ 200 ಎಕರೆ ಜಮೀನು, ರೂ.342 ಕೋಟಿ ಮೊತ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ವೇತನ, ಮೂಲ ಸೌಕರ್ಯ ಸಲಕರಣೆಗಳು, ವಾಹನಗಳು, ಪೀಠೋಪಕರಣ ಮತ್ತು ಇತರೆ ವಸ್ತುಗಳನ್ನು ಖರೀದಿಸಲು ಅಗತ್ಯವಿದೆ ಎಂದು ಹೇಳಲಾಗ್ತಿದೆ.
ಯಾವ್ಯಾವ ವಿಶ್ವವಿದ್ಯಾಲಯಗಳಿಗೆ ಬೀಗ ಬೀಳಲಿದೆ?
ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಕೋಟೆ, ಮಹಾರಾಣಿ ಕ್ಲಸ್ಟರ್, ನೃಪತುಂಗ ಮತ್ತು ಮಂಡ್ಯ ವಿಶ್ವವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನಿಸಲಾಗಿದೆ.




