ಕ್ರೈಂ ಸ್ಟೋರಿರಾಜ್ಯ
ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲು

ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ. ಪಂಜಾಬ್ನ ಪಟಿಯಾಲದಲ್ಲಿ ಈ ಘಟನೆ ನಡೆದಿದ್ದು, ಗಾಯಗೊಂಡಿರುವ ಶಾಂತಕುಮಾರ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ರೈತ ಮುಖಂಡರ ಸಭೆಯಲ್ಲಿ ಭಾಗವಹಿಸಲು ಶಾಂತಕುಮಾರ್ ಅವರು ತೆರಳುತ್ತಿದ್ದರು. ಈ ವೇಳೆ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಶಾಂತಕುಮಾರ್ ಸೇರಿ ತಮಿಳುನಾಡಿನ ಪಾಂಡಿಯನ್ ಕೂಡ ಗಾಯಗೊಂಡಿದ್ದಾರೆ. ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.




