Freedom TV

ಮೆಟ್ರೋ ಟಿಕೆಟ್ ದರ ಏರಿಕೆ ವಿರುದ್ದ ಪ್ರತಿಭಟನೆ; ABVP ಕಾರ್ಯಕರ್ತರ ವಿರುದ್ದ FIR

ಬೆಂಗಳೂರು: ನಮ್ಮ ಮೆಟ್ರೋ ದರ ಏರಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೇ ಇಂದು ಬೆಳಿಗ್ಗೆ ಎಬಿವಿಪಿ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿತು.

ಅನುಮತಿ ಪಡೆಯದೇ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಬಳಿ ಪ್ರತಿಭಟನೆ  ನಡೆಸಿದ್ದಕ್ಕಾಗಿ 16 ಕಾರ್ಯಕರ್ತರ ವಿರುದ್ದ ಕಾಟನಪೇಟೆ ಪೋಲಿಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಕೆಲ ದಿನಗಳ ಹಿಂದೆ ಬಿಎಂಆರ್ ಸಿಎಲ್ ಪ್ರಯಾಣ ದರ ಏರಿಕೆ ಮಾಡಿ ಆದೇಶ ಹೊರಡಿಸಿತ್ತು. ಬಳಿಕ ಪ್ರಯಾಣಿಕರಿಂದ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಟಿಕೆಟ್ ದರದಲ್ಲಿ ಕೊಂಚ ಇಳಿಕೆ ಮಾಡಿತ್ತು.

Comments (0)

Your email address will not be published. Required fields are marked *

Back to top button