Freedom TV

ದೆಹಲಿ ಕಾಲ್ತುಳಿತ ಪ್ರಕರಣ; ಮೃತ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ಘೋಷಿಸಿದ ರೈಲ್ವೆ ಇಲಾಖೆ

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಶನಿವಾರ ರಾತ್ರಿ ಕಾಲ್ತುಳಿತದಿಂದ ಮಹಾ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದಾರೆ.

ಈ ಹಿನ್ನಲೇಯಲ್ಲಿ ಮೃತ ಕುಟುಂಬಗಳಿಗೆ ರೆಲ್ವೆ ಇಲಾಖೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದೆ.

ಇನ್ನು ಗಂಭೀರವಾಗಿ ಗಾಯಗೊಂಡವರಿಗೆ ತಲಾ 2.5 ಲಕ್ಷ ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ ತಲಾ 1 ಲಕ್ಷ ಪರಿಹಾರ ಘೋಷಿಸಲಾಗಿದೆ ಎಂದು ರೆಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಮಹಾಕುಂಭಮೇಳದಲ್ಲಿ ಭಾಗಿಯಾಗಲು ಸಾವಿರಾರು ಜನ ರೈಲ್ವೆ ನಿಲ್ದಾಣದಲ್ಲಿ ಜಮಾಯಿಸಿದ್ದರು. ಆದರೆ ಕೆಲ ರೈಲುಗಳು ವಿಳಂಬವಾದ ಕಾರಣ 14ನೇ ಪ್ಲಾಟ್ ಫಾರ್ಮ್ ಬಳಿ ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ.

Comments (0)

Your email address will not be published. Required fields are marked *

Back to top button