ರಾಜ್ಯಸುದ್ದಿ

ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಬೆಂಗಳೂರಿಗೆ ಏರ್ ಲಿಫ್ಟ್

ಬೆಂಗಳೂರು: ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌
ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ ಶಾಂತಕುಮಾರ್ ಅವರು ಗಾಯಗೊಂಡು ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಿಷಯ ತಿಳಿದ ಕೂಡಲೇ ಕೇಂದ್ರ ಸಚಿವ ಸೋಮಣ್ಣ ಶಾಂತಕುಮಾರ್ ಅವರನ್ನು ಏರ್ ಲಿಫ್ಟ್ ಮಾಡುವುದುಕ್ಕೆ ಸೂಚನೆ ನೀಡಿದ್ದರು. ಈ ಬೆನ್ನಲ್ಲೇ ಇಬ್ಬರು ಸಹಾಯಕರು ಹಾಗೂ ವೈದ್ಯರ ತಂಡದೊಂದಿಗೆ ಇಂದು ಶಾಂತಕುಮಾರ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದೆ.

Comments (0)

Your email address will not be published. Required fields are marked *

Back to top button