ಬೆಂಗಳೂರು: ನಟ ದರ್ಶನ ಆರೋಗ್ಯ ಸಮಸ್ಯೆಯಿಂದಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಇದೀಗ ದರ್ಶನ ಹೊಸ ಪೋಸ್ಟ್ವೊಂದನ್ನು ಮಾಡಿದ್ದಾರೆ. ಆ ಮೂಲಕ ತಮ್ಮ ಪ್ರೀತಿಯ ಸೆಲೆಬ್ರಿಟಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಫೆ.16ರಂದು ಬರ್ತ್ ಡೇ ರಂದು ದರ್ಶನ್ ಬರ್ತ್ ಡೇ ಇತ್ತು. ಇದಕ್ಕೂ ಮುನ್ನ ವಿಡಿಯೊ ಮಾಡಿ ಫ್ಯಾನ್ಸ್ಗೆ ಸಂದೇಶ ನೀಡಿದ್ದ ದರ್ಶನ್, ಆರೋಗ್ಯ ಸಮಸ್ಯೆಯಿಂದ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳತ್ತಿಲ್ಲ ಎಂದು ತಿಳಿಸಿದ್ದರು. ಅದಾಗ್ಯೂ ಅಭಿಮಾನಿಗಳು ಮಾತ್ರ ಅವರ ಫೊಟೋವನ್ನು ಕಾಮನ್ ಡಿಪಿಯನ್ನಾಗಿ ಬಳಸಿ, ಸೋಶಿಯಲ್ ಮೀಡಿಯಾಗಳಲ್ಲಿ ಶುಭಾಶಯ ತಿಳಿಸಿ ಸಂಭ್ರಮಿಸಿದ್ದರು. ದರ್ಶನ ಕಾಮನ್ ಡಿಪಿ (CDP) ಯನ್ನು ಅವರ ಪತ್ನಿ ವಿಜಯಲಕ್ಷ್ಮಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಬಿಡುಗಡೆ ಮಾಡಿದ್ದರು.
ದರ್ಶನ್ ಅಭಿಮಾನಿಗಳಿಗೆ ಹೇಳಿದ್ದೇನು?
ಪ್ರೀತಿಯ ಸೆಲೆಬ್ರಿಟಿಸ್ ಗಳೇ ನಮಸ್ಕಾರ,
ನಿಮ್ಮ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಭಾಸವಾಗುತ್ತದೆ. ಕಷ್ಟದಲ್ಲಿದ್ದಾಗ ಸದಾ ಬೆಂಬಲದಲ್ಲಿ ನಿಲ್ಲುವಂತ ಈ ನಿಷ್ಕಲ್ಮಶ ಹೃದಯಗಳಿಗೆ ನಾನು ಸದಾ ಚಿರಋಣಿ. ನಿಮ್ಮ ಪ್ರೀತಿ-ಪ್ರೋತ್ಸಾಹ ಮತ್ತು ಬೆಂಬಲವೇ ನನ್ನ ಜೀವನದ ನಿಜವಾದ ಆಸ್ತಿ. ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸುವ ನಿಮ್ಮ ಪ್ರೀತಿಯ ಆಶೀರ್ವಾದಕ್ಕೆ ನಾನು ಮನದಾಳದಿಂದ ಕೃತಜ್ಞನಾಗಿದ್ದೇನೆ. ನೀವು ಹಲವೆಡೆ ಮಾಡುತ್ತಿರುವ ದಾನ-ಧರ್ಮ ಕಾರ್ಯಗಳು ಸಹಸ್ರಾರು ಹೃದಯಗಳನ್ನು ಸ್ಪರ್ಶಿಸುವಂತಹದ್ದು. ನಿಮ್ಮ ಈ ಕೆಲಸಗಳು ಅನೇಕರಿಗೆ ದಾರಿದೀಪವಾಗಲಿ. ನಿಮ್ಮ ಮನದಾಳದ ಪ್ರೀತಿಯ ಹಾರೈಕೆಗಳು ನನ್ನ ಮುಂದಿನ ಹೆಜ್ಜೆಗೆ ದಾರಿ ತೋರುವ ಬೆಳಕು ಎಂದರೆ ಅತಿಶಯೋಕ್ತಿಯಲ್ಲ. ಆದಷ್ಟು ಬೇಗ ನಿಮ್ಮನ್ನು ಕಾಣುವ ಹಂಬಲ, ಕಾತುರ ನನ್ನಲ್ಲಿಯೂ ಇದೆ. ನಿಮ್ಮನ್ನು ಪಡೆದಿರುವ ನಾನೇ ಧನ್ಯ . ಎಂದು ನಟ ದರ್ಶನ ಫೋಸ್ಟ್ ಮಾಡಿದ್ದಾರೆ.