ರಾಜಕೀಯರಾಜ್ಯ

ನಮ್ಮ ಸರ್ಕಾರ ದಿವಾಳಿ ಆಗಲ್ಲ; ಶಾಸಕ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ದಿನೇ ದಿನೇ ಬದಲಾವಣೆಗಳು ಆಗುತ್ತಲೆ ಇದೆ. ಅತ್ತ ಸಿಎಂ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿದ್ದರೆ, ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯನವರೇ  ರಾಜ್ಯ ಬಜೆಟ್ ಮಂಡನೆ ಬಗ್ಗೆ ಹೇಳಿಕೊಂಡಿದ್ದಾರೆ. ಇದೀಗ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್‌ ಈಶ್ವರ್ ಅವರು ಕೂಡಾ ಇಂದು ಬಜೆಟ್‌ ಮಂಡನೆ, ಗ್ಯಾರಂಟಿ ಬಗ್ಗೆ ಮಾತನಾಡಿದ್ದಾರೆ.

ಇಂದು ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್ ಅವರು, ನಮ್ಮ ಸಿದ್ದರಾಮಯ್ಯ 16ನೇ ಬಜೆಟ್‌ ಮಂಡಿಸುತ್ತಿದ್ದಾರೆ. ಅಲ್ಲದೇ ಈ ಬಾರಿ ಬಜೆಟ್‌ ಗಾತ್ರ 4 ಲಕ್ಷ ಕೋಟಿಗೂ ಹೆಚ್ಚಿದೆ. ಇದರಿಂದಾಗಿ  ನಮ್ಮ ಸರ್ಕಾರ ದಿವಾಳಿ ಆಗಲ್ಲ ಎಂದು ಹೇಳಿದ್ದಾರೆ.

Comments (0)

Your email address will not be published. Required fields are marked *

Back to top button