Top News

ಪೋಕ್ಸೋ ಪ್ರಕರಣದಲ್ಲಿ ಬಿಎಸ್‌ವೈಗೆ ಎದುರಾಗುತ್ತಾ ಸಂಕಷ್ಟ?

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದರಿಂದ ಯಡಿಯೂರಪ್ಪ ಅವರಿಗೆ ಸಂಕಷ್ಟ ಶುರುವಾಗುವ ಲಕ್ಷಣಗಳು ಕಾಣುತ್ತಿವೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪಗೆ ಪಾಸ್ಟ್ ಟ್ರ್ಯಾಕ್ ಕೋರ್ಟ್ 1 ರಿಂದ ಸಮನ್ಸ್ ಜಾರಿಯಾಗಿದೆ. ಮಾರ್ಚ್ 15ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸದಲಾಗಿದೆ. ಪೋಕ್ಸೊ ಕೇಸ್ ನಲ್ಲಿ ಕಾಗ್ನಿಜೆನ್ಸ್ ತೆಗೆದುಕೊಂಡ ಬೆನ್ನಲ್ಲೇ ನೋಟಿಸ್ ಜಾರಿ ಮಾಡಿದೆ.

ಇತ್ತೀಚೆಗೆ ಬಿಎಸ್‌ ಯಡಿಯೂರಪ್ಪ ಅವರಿಗೆ ಈ ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಬಂಧನ ಭೀತಿಯಿಂದ ಪಾರಾಗಿದ್ದರು. ಪೋಕ್ಸೋ ಪ್ರಕರಣದಲ್ಲಿ ಧಾರವಾಡ ಹೈಕೋರ್ಟ್ ಸಧ್ಯ ಬಿಎಸ್ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದೆ. ಸಧ್ಯ ಬಂಧನದಿಂದ ಅವರು ಬಚಾವ್ ಆಗಿದ್ದಾರೆ. ಆದರೆ, ಕೆಳಹಂತದ ನ್ಯಾಯಾಲಯದಲ್ಲಿ ಪ್ರಕ್ರಿಯೆಗಳು ಆರಂಭಿಸಬಹುದು ಎಂದು ಹೈಕೋರ್ಟ್ ಹೇಳಿದ್ದಾರೆ ಹಾಗಾಗಿ ಇದು ತಾತ್ಕಾಲಿಕ ರಿಲೀಫ್ ಎಂದು ಹೇಳಬಹುದು

Comments (0)

Your email address will not be published. Required fields are marked *

Back to top button