Thursday, November 20, 2025
22.5 C
Bengaluru
Google search engine
LIVE
ಮನೆ#Exclusive NewsTop Newsಸರ್ಕಾರದ ಗ್ಯಾರಂಟಿಗಳನ್ನು ಹಾಡಿ ಹೊಗಳಿದ ರಾಜ್ಯಪಾಲ ಗೆಹ್ಲೋಟ್

ಸರ್ಕಾರದ ಗ್ಯಾರಂಟಿಗಳನ್ನು ಹಾಡಿ ಹೊಗಳಿದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: ಬಜೆಟ್‌ನಲ್ಲಿ ಮಾಡಿದ್ದ 334 ಘೋಷಣೆಗಳ ಪೈಕಿ 331 ಘೋಷಣೆಗಳಿಗೆ ಸರ್ಕಾರಿ ಆದೇಶ ಆಗಿದೆ ಎಂದು ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ವಿಧಾನಮಂಡಲದಲ್ಲಿ ಹೇಳಿದರು.

ಜಂಟಿ ಅಧಿವೇಶನವನ್ನ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದೆ. ರಾಜ್ಯದ ಆಯವ್ಯಯ ವೃದ್ಧಿಯಾಗುತ್ತಿದೆ. ರಾಜ್ಯದಲ್ಲಿ ಉತ್ತಮ ಮಳೆ ಆಗಿದ್ದರಿಂದ ಉತ್ತಮ ಫಸಲು ಬಂದಿದೆ. ರಾಜ್ಯ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಗ್ಯಾರಂಟಿಯಿಂದ ರಾಜ್ಯ ದಿವಾಳಿ ಆಗುತ್ತೆ ಎಂದು ಹೇಳುತ್ತಿದ್ದರು. ಎಲ್ಲ ಆರೋಪಗಳು ಸುಳ್ಳು ಎಂದು ಸರ್ಕಾರ ಸಾಬೀತು ಮಾಡಿದೆ. ಸರ್ಕಾರ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯನ್ನು ತಲುಪಿಸಿದೆ. ಜಿಎಸ್​ಟಿ ಸಂಗ್ರಹದಲ್ಲೂ ರಾಜ್ಯ ಸರ್ಕಾರ ಮುಂಚೂಣಿಯಲ್ಲಿದೆ. ಕೆಎಂಎಫ್​ನಿಂದ ಅತಿ ಹೆಚ್ಚು ಪಾಲು ಸಂಗ್ರಹವಾಗುತ್ತಿದೆ, ಸಾಮಾಜಿಕ ಪಿಂಚಣಿ ಯೋಜನೆ ಸೇರಿ ನೇರ ನಗದು – ಸಬ್ಸಿಡಿ ಪ್ರೋತ್ಸಾಹದಿಂದ 1.25 ಕೋಟಿಗೂ ಹೆಚ್ಚು ಕುಟುಂಬಗಳಿಗೆ ಅನುಕೂಲ ಆಗಿದೆ. 13 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದೆ. ಉನ್ನತ ಶಿಕ್ಷಣದಲ್ಲಿ 1,088 ಸಹಾಯಕ ಪ್ರಾಧ್ಯಾಪಕರ ನೇಮಕ ಮಾಡಲಾಗಿದೆ. 8,311 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲಾಗಿದೆ, ಕಳೆದ 19 ತಿಂಗಳಲ್ಲಿ ಗಂಭೀರವಾದ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳೇನು ಉದ್ಭವಿಸಿಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಕೆಲಸ ಮಾಡುತ್ತಿವೆ, ಸರ್ಕಾರ ಬಂದಾಗಿನಿಂದ ಗ್ಯಾರಂಟಿ ಯೋಜನೆಗಳಿಗೆ 70,000 ಕೋಟಿ ಹಣ ಬಿಡುಗಡೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವರ್ಷಕ್ಕೆ 90,000 ಕೋಟಿಗೂ ಹೆಚ್ಚು ಹಣ ಖರ್ಚು ಮಾಡಲಾಗುತ್ತಿದೆ. ಸರ್ಕಾರ ಅಭಿವೃದ್ಧಿ ವೇಗ ಸದೃಢಗೊಳಿಸಿದೆ. ಆಡಳಿತ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರು ಒರೆಸುವ ಅವಕಾಶವಾಗಿ ಬಳಕೆಗೆ ಬದ್ಧವಾಗಿದೆ ಎಂದು ಸರ್ಕಾರದ ಸಾಧನೆಗಳನ್ನ ವಿವರಿಸಿದರು

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments