ಬೆಂಗಳೂರು: ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದು ಈಗಾಗಲೇ ನಿರ್ಧಾರವಾದ ವಿಚಾರ ಅನ್ನೋ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ಕೊಟ್ಟರು.
ಈ ಕುರಿತು ವಿಧಾನಸೌಧ ಆವರಣದಲ್ಲಿ ಮಾತನಾಡಿದ ಅವರು, ಮೊದಲು ವೀರಪ್ಪ ಮೊಯ್ಲಿಅವರು ಹೇಳಿದ್ದು ಸರಿಯಲ್ಲ ಅಂದರು. ನಂತರ ತಮ್ಮ ಹೇಳಿಕೆಯನ್ನು ಬದಲಾಯಿಸಿ, ಮೊಯ್ಲಿ ಅವರು ಪಕ್ಷದ ಹಿರಿಯ ನಾಯಕರು, ಮಾಜಿ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಕಾರ್ಯಕಾರಣಿ ಸಮಿತಿಯ ಸದಸ್ಯರೂ ಆಗಿರುವದರಿಂದ ಅವರ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ ಎಂದರು.