
ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದರು ಅನ್ನುವ ಆರೋಪದಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದಾರೆ.
ದುಬೈಯಿಂದ ಬಂದಿದ್ದ ಅವರು ಬರೋಬ್ಬರಿ 14.8ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಬಿಸಿನೆಸ್ ಕೆಲಸದ ನಿಮ್ಮಿತ್ತ ನಟಿ ರನ್ಯಾ ರಾವ್ ಆಗಾಗ ದುಬೈಗೆ ಪ್ರಯಾಣ ಬೆಳೆಸುತ್ತಿದ್ದರು. ಅದೇ ರೀತಿ ಮಾರ್ಚ್ 3ರ ರಾತ್ರಿ ಕೂಡ ಅವರು ದುಬೈನಿಂದ ಬಂದಿದ್ದಾರೆ. ಈ ವೇಳೆ ಅವರನ್ನು ವಶಕ್ಕೆ ಪಡೆದಾಗ ಉಡುಪಿನ ಒಳಗೆ ಬರೋಬ್ಬರಿ 14.8 ಕೆಜಿ ಚಿನ್ನ ಸಿಕ್ಕಿದೆ. ವಶಕ್ಕೆ ಪಡೆದ ಚಿನ್ನದ ಬೆಲೆ 12ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
ಅನೇಕ ಬಾರಿ ದುಬೈಗೆ ಹೋಗಿ ಬರುತ್ತಿದ್ದರು ರನ್ಯಾ. ಈ ವಿಚಾರದಿಂದ ಕಸ್ಟಮ್ನ ಡಿಆರ್ಐ ಅಧಿಕಾರಿಗಳಿಗೆ ಅನುಮಾನ ಮೂಡಿತ್ತು. ಹೀಗಾಗಿ ದೆಹಲಿಯ DRI ಅಧಿಕಾರಿಗಳು ನಟಿಯ ಹಿಂದೆ ಬಿದ್ದಿದ್ದರು.
ಅವರು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಎರಡು ಗಂಟೆ ಮೊದಲೇ ಆಗಮಿಸಿದ್ದರು. ಈ ರೀತಿ ವಶಕ್ಕೆ ಪಡೆದ ಚಿನ್ನದ ಮೌಲ್ಯ ಸುಮಾರು 12 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
ಇನ್ನು ತನಿಖೆ ಮುಂದುವರೆಸಿದ ಅಧಿಕಾರಿಗಳು ಲ್ಯಾವೆಲ್ಲೆ ರಸ್ತೆಯಲ್ಲಿರುವ ರನ್ಯಾ ರಾವ್ ಅವರ ಐಷಾರಾಮಿ ಫ್ಲಾಟ್‌ನಿಂದ 2.06 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು 2.67 ಕೋಟಿ ರೂಪಾಯಿ ನಗದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆ ಫ್ಲಾಟ್‌ಗೆ ನಟಿ 4.5 ಲಕ್ಷ ರೂಪಾಯಿ ಬಾಡಿಗೆ ಪಾವತಿಸುತ್ತಿದ್ದರು ಎಂದು ಎಂದು ವರದಿಯಾಗಿದೆ.




