ರಾಜಕೀಯರಾಜ್ಯಸುದ್ದಿ

ರಾಜ್ಯ ಬಜೆಟ್ ಅಧಿವೇಶನದಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ಪರಿಶೀಲನಾ ವರದಿ ಮಂಡನೆ’!

ಬೆಂಗಳೂರು: ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ಗರಿಷ್ಠ 7 ಪಾಲಿಕೆಗಳನ್ನಾಗಿ ಬಿಬಿಎಂಪಿಯನ್ನು ವಿಂಗಡಿಸುವುದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿದಂತೆ ಹಲವು ಮಹತ್ವದ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಇಂದು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಶಿವಾಜಿನಗರದ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರ ಅಧ್ಯಕ್ಷತೆಯ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕವನ್ನು ಪರಿಶೀಲಿಸಿ ವರದಿ ನೀಡಲು ರಚಿಸಲಾಗಿದ್ದ ಕರ್ನಾಟಕ ವಿಧಾನಮಂಡಲದ ಜಂಟಿ ಪರಿಶೀಲನಾ ಸಮಿತಿ ವರದಿಯನ್ನು ಇಂದು ಮಂಡನೆ ಮಾಡಲಾಯಿತು.

ವರದಿಯಲ್ಲಿನ ಶಿಫಾರಸುಗಳ ಪ್ರಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯಿದೆ ಅಧಿಸೂಚನೆ ಜಾರಿಯಾದ ತಕ್ಷಣ ಅನುಷ್ಟಾನಕ್ಕೆ ಬರಲಿದೆ. ಗ್ರೇಟರ್ ಬೆಂಗಳೂರಿನಲ್ಲಿ 7 ಕ್ಕೂ ಮೀರದಂತೆ ಮಹಾನಗರ ಪಾಲಿಕೆಗಳಿರಬೇಕು ಎಂದು ಸಲಹೆ ನೀಡಲಾಗಿದೆ.

Comments (0)

Your email address will not be published. Required fields are marked *

Back to top button