Top Newsರಾಜಕೀಯರಾಜ್ಯ

ಮಾರ್ಚ್ 7ಕ್ಕೆ ಗೃಹಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಾರ್ಚ್ 7 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಅವರು ತಮಿಳುನಾಡಿನಿಂದ ಬೆಂಗಳೂರಿಗೆ ಬರುತ್ತಿದ್ದಾರೆ. ಅವರು ನೆಲಮಂಗಲದಲ್ಲಿ ವಿಶ್ವತೀರ್ಥ ಮಹಾಸ್ವಾಮಿಗಳು ಸ್ಥಾಪಿಸಿದ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಸುದ್ದಿಗಾರರಿಗೆ ತಿಳಿಸಿದ್ದಾರೆ.

Comments (0)

Your email address will not be published. Required fields are marked *

Back to top button